ಉದಯರಶ್ಮಿ ದಿನಪತ್ರಿಕೆ
ಇಂಡಿ: ತಾಲೂಕಿನ ರೂಗಿ ಗ್ರಾಮ ಪಂಚಾಯತಿಗೆ ಸನ್ 2023-24ನೇ ಸಾಲಿನ ನರೇಗಾ ಯೋಜನೆಯ ‘ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ’ ದೊರಕಿದೆ.
ಸನ್ 2023-24ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅತ್ಯುತ್ತಮ ಕಾಮಗಾರಿಗಳನ್ನು ಅನುಷ್ಠಾನ ಮಾಡಿದ ಫಲವಾಗಿ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದ್ದು, ದಿನಾಂಕ: 05.02.2025ರಂದು ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಿದ ನರೇಗಾ ಹಬ್ಬ-2025 ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರಾದ ಸೊಮವ್ವ ಯಶವಂತ ಹೊಸಮನಿ, ತಾಪಂ ಸಹಾಯಕ ನಿರ್ದೇಶಕರಾದ ಸಂಜಯ ಖಡಗೇಖರ, ಗ್ರಾಪಂ ಪಿಡಿಒ ಬಸವರಾಜ ಬಬಲಾದ, ಟಿಐಇಸಿ ರಾಮನಗೌಡ ಸರಬಡಗಿ, ತಾಂತ್ರಿಕ ಸಹಾಯಕರಾದ ಈರಣ್ಣ ಇಂಡಿ ಸೇರಿದಂತೆ ಇತರರು ಹಾಜರಿದ್ದರು.