ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೨ನೇ ಅವಧಿಗೆ ಉಪ ಮಹಾಪೌರರ ಸ್ಥಾನಗಳಿಗೆ ಜ.೨೭ರಂದು ನಿಗದಿಯಾಗಿದ್ದ ಚುನಾವಣೆಯನ್ನು ಅನಿವಾರ್ಯ ಕಾರಣದಿಂದ ಫೆ.೧೨ಕ್ಕೆ ಮುಂದೂಡಲಾಗಿದೆ. ಅಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ಪ್ರಕ್ರಿಯೆಗಳು ಜರುಗಲಿವೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.