ತಾಲೂಕಾ ಮಟ್ಟದ & ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ವಿವಿಧ ತಾಲೂಕ ಮಟ್ಟದ ಆಸ್ಪತ್ರೆಯಲ್ಲಿ ಹಾಗೂ ವಿವಿಧ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇರೆಗೆ ಷರತ್ತು ಹಾಗೂ ನಿಬಂಧನೆಗೊಳಪಟ್ಟು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಜನರಲ್ ಮೆಡಿಸಿನ್ ತಜ್ಞ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ,ಕಿವಿ, ಮೂಗು ಮತ್ತು ಗಂಟಲು ತಜ್ಞ,ಚರ್ಮ ರೋಗ ತಜ್ಞ,ಚಿಕ್ಕ ಮಕ್ಕಳ ತಜ್ಞ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ ಹುದ್ದೆಗಳ ನೇರ ಸಂದರ್ಶನಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆ ಸಹಿತ ಹಾಜರಾಗಬಹುದಾಗಿದೆ.
ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲಾತಿ ಸಹಿತ ಹಾಗೂ ಒಂದು ಸೆಟ್ ಝರಾಕ್ಷ ಪ್ರತಿಯೊಂದಿಗೆ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯ ಸಿಬ್ಬಂದಿ-೧ ವಿಭಾಗವನ್ನೂ ಹಾಗೂ ದೂರವಾಣಿ ಸಂಖ್ಯೆ: ೦೮೩೫೨ ೨೫೦೧೦೭ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.