ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಾ ೫ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ, ನಾಟಕಕಾರ ಅಶೋಕ ಮಣಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸಾಹಿತ್ಯ ಕೃಷಿ, ಸಾಹಿತ್ಯ ಸೇವೆ, ಸಂಘಟನೆ ಹಿರಿತನ ಇವುಗಳ ಆಧಾರದ ಮೇಲೆ ಈ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಮತ್ತು ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.