ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ದೈಹಿಕ ಬೆಳವಣಿಗೆಗೆ ಯುವಕರು ಹೆಚ್ಚು ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ಯುವನಾಯಕ ಬಾಪುಗೌಡ ದರ್ಶನಪುರ ಹೇಳಿದರು.
ಪಟ್ಟಣದ ಹಿಲ್ ಟಾಪ್ ನಲ್ಲಿ ಗುರುವಾರ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿಜೇತ ತಂಡಕ್ಕೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಆಟೋಟಗಳಲ್ಲಿ ಸೋಲು ಗೆಲುವು ಸಮನಾಗಿ ಸ್ವೀಕರಿಸುವ ಮನೋಭಾವ ಕ್ರೀಡಾಪಟುಗಳು ಮೈಗೂಡಿಸಿಕೊಳ್ಳಬೇಕು ಎಂದವರು, ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ನೆರವಾಗುತ್ತದೆ, ಯುವ ಸಬಲೀಕರಣಕ್ಕೆ ಸಂಘ ಸಂಸ್ಥೆಗಳು ಸಹಕಾರದೊಂದಿಗೆ ಕ್ರೀಡಾಕೂಟಗಳನ್ನು ಆಯೋಜಿಸುತ್ತಿರುವುದು ಅಭಿನಂದನೀಯ ಎಂದರು.
ಈ ವೇಳೆ ಮುಖಂಡರಾದ ವಾಮನರಾವ್ ದೇಶಪಾಂಡೆ, ಮಹಿಪಾಲರೆಡ್ಡಿ ಡಿಗ್ಗಾವಿ, ರಹೇಮಾನ ಪಟೇಲ್. ಅಲ್ತಾಫ್ ಸಾಸನೂರ, ರಂಗಪ್ಪ ಭೋವಿ, ಶಾಂತು ಪಾಟೀಲ್, ಕ್ರೀಡಾಪಟುಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

