ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ತಾಲೂಕಿನ ಗರಸಂಗಿ-ಬಿಕೆ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಬಲರಾಮ ಲಮಾಣಿ ಇವರಿಗೆ ರಾಜ್ಯಮಟ್ಟದ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿ ಘೋಷಣೆಯಾಗಿದೆ.
ಹುಬ್ಬಳ್ಳಿಯ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಬೆಂಗಳೂರು ಗ್ರಾಮಾಂತರ ಜಿಲ್ಲಾಘಟಕ ಮತ್ತು ನೆಲಮಂಗಲ ತಾಲೂಕು ಘಟಕಗಳ ಸಹಯೋಗದಲ್ಲಿ ಫೆ.೮ರಂದು ಬೆಳಿಗ್ಗೆ ೧೧ ಗಂಟೆಗೆ ಬೆಂಗಳೂರು ನೆಲಮಂಗಲದ ಪವಾಡ ಶ್ರೀಬಸವಣ್ಣ ದೇವರ ಮಠದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧುಬಂಗಾರಪ್ಪ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಈ ವೇಳೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಡಾ.ಕೆ.ಸುಧಾಕರ, ವಿಪ ಸದಸ್ಯರು, ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿರುವರೆಂದು ಜಿಲ್ಲಾ ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಣ್ಣ ಉಕ್ಕಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.