ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಇನ್ನಷ್ಟು ಉತ್ತೇಜಿಸಲು ಶಿಕ್ಷಣ ಇಲಾಖೆ ಫೋನ್ ಇನ್ ನೇರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈಗಾಗಲೇ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದು ಬರುವ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಸಂಯೋಜಕಿ ಪಿ.ಎ.ಬಾಳಿಕಾಯಿ ಹೇಳಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಇಂಗ್ಲೀಷ್ ವಿಷಯದ ಫೋನ್ ಇನ್ ನೇರ್ ಕಾರ್ಯಕ್ರಮದ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮ ನೇರವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ ತಲುಪುವಂತಹದ್ದು. ವಿದ್ಯಾರ್ಥಿಗಳಿಗೆ ಯಾವುದೇ ವಿಷಯದಲ್ಲಿ ಯಾವುದೇ ಸಂದೇಹಗಳಿದ್ದರೂ ಸುಲಭವಾಗಿ ಫೋನ್ ಮೂಲಕ ಬಗೆಹರಿಸಿಕೊಳ್ಳಬಹುದು. ಇದರಿಂದ ರಾಜ್ಯದ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದಲ್ಲಿಯೂ ಸಾಕಷ್ಟು ಸುಧಾರಣೆ ತರಲು ಸಾಧ್ಯ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆದುಕೊಂಡು ತಮ್ಮಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದರು.
ಈ ವೇಳೆ ಇಂಗ್ಲೀಷ್ ವಿಷಯದಲ್ಲಿ ನುರಿತ ಶಿಕ್ಷಕರಾದ ಎನ್.ಬಿ.ಪಿಂಜಾರ, ವಾಗೇಶ ಹಿರೇಮಠ, ಬಸವರಾಜ ಹಂಚಲಿ, ಎಸ್.ಎಸ್.ಅಂಗಡಿ ಹಲವು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಿದರು.