ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಶುಕ್ರವಾರ ಬೆಳಗ್ಗೆ ಭೇಟಿ ನೀಡಿ, ಈ ಹಿಂದೆ ನೀಡಿರುವ ನಿರ್ದೇಶನದಂತೆ ಸ್ವಚ್ಛತಾ ಕಾರ್ಯದ ಕುರಿತು ಪರಿಶೀಲಿಸಿ, ರಂಗಮಂದಿರದ ಒಳಗೆ ನಡೆಯುತ್ತಿರುವ ರ‍್ಯಾಂಪ್ ದುರಸ್ತಿ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ರಂಗಮಂದಿರದ ಗೊಡೆಗಳ ಮೇಲೆ ಕಲೆ-ಸಂಸ್ಕೃತಿಯನ್ನು ಬಿಂಬಿಸುವ ವರ್ಣರಂಚಿತ ರೇಖಾ ಚಿತ್ರ/ ವಿವಿಧ ಚಿತ್ರಕಲೆಗಳನ್ನು ಚಿತ್ರಕಲಾ ಶಿಕ್ಷಕರಿಂದ ಬಿಡಿಸಲು ಅಗತ್ಯ ಕ್ರಮವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

