ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ ಬೆಂಗಳೂರ, ಸಂಘದ ಬೈಲಾ ನಿಯಮದ ಪ್ರಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ರಾಜ್ಯ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ ವಿಜಯಪುರ ಜಿಲ್ಲೆಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಸುರೇಶ ಶಡಶ್ಯಾಳ ಅವರನ್ನು ರಾಜ್ಯ ಸಂಘದ ಹಿರಿಯ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಜುಬೇರ ಕೆರೂರ, ಪ್ರಧಾನ ಕಾರ್ಯದರ್ಶಿ ರಾಜಶೇಖರ ದೈವಾಡಿ, ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಗಂಗಾಧರ ಜೇವೂರ, ನೀಜು ಮೇಲಿನಕೇರಿ, ಜಿಲ್ಲೆಯ ನೌಕರ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಸಮಸ್ತ ನೌಕರರ ಬಳಗ ಹಾಗೂ ಶಿಕ್ಷಕ ಬಳಗ ಅಭಿನಂದನೆ ಸಲ್ಲಿಸಿದ್ದಾರೆ.

