Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಹಕಾರಿ ಸಂಘಗಳಿಂದ ರೈತರು ಆರ್ಥಿಕವಾಗಿ ಸಬಲರಾಗಬಹುದು
(ರಾಜ್ಯ ) ಜಿಲ್ಲೆ

ಸಹಕಾರಿ ಸಂಘಗಳಿಂದ ರೈತರು ಆರ್ಥಿಕವಾಗಿ ಸಬಲರಾಗಬಹುದು

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ, ವ್ಹಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಶಿವಾನಂದ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ನಮ್ಮ ಹಿರಿಯರು ಪ್ರಾಂಜಲ ಮನಸ್ಸಿನಿಂದ ಎಲ್ಲರಿಗೂ ನೆರವಾಗುವ ಉದ್ದೇಶದಿಂದ ಸಹಕಾರ ಸಂಘಗಳನ್ನು ಬೆಳೆಸಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಹಾಗೂ ಖಾಸಗಿ ವ್ಯಕ್ತಿಗಳಿಂದ ಪಡೆಯುವ ಸಾಲದಿಂದ ಕಿರುಕುಳ ತಪ್ಪಿಸಿಕೊಳ್ಳಲು ಸಹಕಾರಿ ಸಂಘಗಳಿಂದ ಸಾಲ ಪಡೆದುಕೊಂಡು ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲರಾಗಬೇಕೆಂದು ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ, ವ್ಹಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಶಿವಾನಂದ ಪಾಟೀಲ ಹೇಳಿದರು.
ತಾಲೂಕಿನ ಮಣೂರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಜರುಗಿದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಈಚೆಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಅನೇಕ ಜನರು ಬಿದ್ದು ಜೀವ ಕಳೆದುಕೊಳ್ಳುತ್ತಿರುವದನ್ನು ನಾವು ಕಾಣುತ್ತಿದ್ದೇವೆ. ಸಾಲ ಸಿಗುತ್ತದೆ ಎಂದು ಎಂದಿಗೂ ಯಥೇಚ್ಛವಾಗಿ ತೆಗೆದುಕೊಳ್ಳಬಾರದು. ಸಾಲದಲ್ಲಿ ಇರುವ ಸ್ಥಿತಿ ಇರಬಾರದು. ನಾವುಗಳೇ ಸಾಲ ನೀಡುವಂತಾಗಬೇಕಿದೆ. ಸಹಕಾರಿ ಸಂಘಗಳಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ರೂ.65 ಸಾವಿರದಿಂದ 3 ಲಕ್ಷ ರೂ.ವರೆಗೆ ಸಾಲ ನೀಡಲಾಗುತ್ತದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಹಕಾರಿಗಳು ಸಹಕಾರ ನೀಡುತ್ತವೆ. ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯಲ್ಲಿ ೬೩ ಸಾವಿರ ರೂ. ಬಂಡವಾಳದೊಂದಿಗೆ ಆರಂಭವಾದ ಡಿಸಿಸಿ ಬ್ಯಾಂಕು ಇಂದು ೧೨ ಸಾವಿರ ಕೋಟಿ ಬಂಡವಾಳ ದುಡಿಯುತ್ತಿದೆ. ಆರಂಭದಲ್ಲಿ ಸಹಕಾರಿಗಳಿಂದ ರೈತರಿಗೆ ಕೇವಲ ೪ ರಿಂದ ೫ ಸಾವಿರ ಸಾಲ ನೀಡಲಾಗುತ್ತಿತ್ತು. ಹಿಂದೆ ೩೭ ಸಾವಿರ ರೈತರಿಗೆ ಸಾಲ ನೀಡಲಾಗಿತ್ತು. ಇಂದು ನಾಲ್ಕೂವರೆ ಲಕ್ಷ ರೈತರಿಗೆ ಸಾಲ ನೀಡಲಾಗಿದೆ. ಇಂದು ಕನಿಷ್ಠ ೬೫ ಸಾವಿರದಿಂದ ಗರಿಷ್ಠ ೩ ಲಕ್ಷ ರೂ. ಸಾಲ ನೀಡಲಾಗುತ್ತಿದೆ. ೧೯೯೭ ರಲ್ಲಿ ಅವಳಿ ಜಿಲ್ಲೆಯಲ್ಲಿ ೧೯೨ ಕೋಟಿ ಸಾಲ ನೀಡಲಾಗಿತ್ತು. ಇಂದು ನಾಲ್ಕೂವರೆ ಸಾವಿರ ಕೋಟಿ ಸಾಲ ನೀಡಲಾಗಿದೆ. ನಮ್ಮ ಸಹಕಾರಿಯಲ್ಲಿ ಜನರು ಇಟ್ಟಿರುವ ಠೇವಣೆಯಲ್ಲಿಯೇ ಸಾಲ ನೀಡುವ ಮೂಲಕ ಸಹಕಾರಿಗಳು ಲಾಭದತ್ತ ಸಾಗುತ್ತಿವೆ. ಇದನ್ನು ರೈತ ಬಾಂಧವರು ಅರಿತುಕೊಂಡು ಸಹಕಾರಿ ಸಂಘಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
೨೦೦೬ ರಲ್ಲಿ ಆರಂಭವಾದ ಮಣೂರ ಗ್ರಾಮದ ಪಿಕೆಪಿಎಸ್ ಬ್ಯಾಂಕು ಅಲ್ಪಾವಧಿಯಲ್ಲಿಯೇ ಈ ಭಾಗದ ರೈತರಿಗೆ ಕಾಮಧೇನು ಕಲ್ಪವೃಕ್ಷವಾಗಿ ಬೆಳೆಯುತ್ತಿರುವುದು ಶ್ಲಾಘನೀಯ. ಇಂದು ಸ್ವಂತ ಕಟ್ಟಡ ಹೊಂದಿ ಕಾರ್ಯನಿರ್ವಹಿಸಲು ಮುಂದಾಗಿರುವದು ಸಂತಸದಾಯಕ ಸಂಗತಿ. ಜಿಲ್ಲೆಯಲ್ಲಿ ೨೭೨ ಪಿಕೆಪಿಎಸ್‌ಗಳಿವೆ. ಇದರಲ್ಲಿ ಈಗಾಗಲೇ ೨೫೧ ಪಿಕೆಪಿಎಸ್ ಸ್ವಂತ ಕಟ್ಟಡಗಳನ್ನು ಹೊಂದುವಲ್ಲಿ ವ್ಹಿಡಿಸಿಸಿ ಬ್ಯಾಂಕು ನೆರವಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಬ್ಯಾಂಕುಗಳು ಸಹ ಸ್ವಂತ ಕಟ್ಟಡ ಹೊಂದುವಲ್ಲಿ ನೆರವು ನೀಡಲಾಗುವುದು ಎಂದ ಅವರು ನ್ಯಾಯವಾದಿ ಬಿ.ಕೆ. ಕಲ್ಲೂರ ಅವರು ಈ ಭಾಗದ ರೈತರಿಗೆ ನೆರವಾಗುವ ಉದ್ದೇಶದಿಂದ ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಮನವಿಗೆ ಸಚಿವರು ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಲು ಬಿಜೆಪಿಯ ಒಬ್ಬ ನಾಯಕರು ಅಡ್ಡಗಾಲು ಹಾಕಿದ್ದರಿಂದಲೇ ಇದು ನೆನೆಗುದಿಗೆ ಬಿದ್ದಿದೆ. ತಾವು ಮಾಡುವುದಿಲ್ಲ. ನಮಗೂ ಮಾಡಲು ಬಿಡುವುದಿಲ್ಲ. ಇವರು ಗೌಡರ ಕೋಣವಿದ್ದಂತೆ ಎಂದು ಪರೋಕ್ಷವಾಗಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ತಿವಿದರು.
ಬಸವನಬಾಗೇವಾಡಿ ವ್ಹಿಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿ, ಇಲ್ಲಿನ ಬ್ಯಾಂಕಿನಲ್ಲಿ ೧೮೦೦ ಸದಸ್ಯರಿದ್ದರೂ ಕೇವಲ ೭೮೦ ಸದಸ್ಯರು ಸಾಲ ಪಡೆದುಕೊಂಡಿದ್ದಾರೆ. ಉಳಿದವರು ಸ್ಥಿತಿವಂತರಿದ್ದರೆ ಬ್ಯಾಂಕಿನಲ್ಲಿ ಹಣವನ್ನು ಠೇವಣಿ ಇಡುವ ಮೂಲಕ ಸಹಕಾರಿ ಅಭಿವೃದ್ಧಿಗೆ ಕೈಜೋಡಿಸಬೇಕು. ಸಹಕಾರಿ ರಂಗದಲ್ಲಿ ಯಾವುದೇ ಜಾತಿ, ರಾಜಕೀಯ ಮಾಡದೇ ಸಹಕಾರಿ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ಅಂದಾಗ ಲಾಭಾಂಶದತ್ತ ಸಾಗಲು ಸಾಧ್ಯವಿದೆ. ಗೊಬ್ಬರ ಮಾರಾಟ ಮಾಡಲು ನಾವು ನಮ್ಮ ಸಂಘದಿಂದ ನೆರವು ನೀಡಲಾಗುವದು. ಈ ಗ್ರಾಮಕ್ಕೆ ಬರುವ ರಸ್ತೆಯನ್ನು ಶೀಘ್ರದಲ್ಲಿಯೇ ಸುಧಾರಿಸಲಾಗುವುದು ಎಂದರು.
ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ನ್ಯಾಯವಾದಿ ಬಿ.ಕೆ.ಕಲ್ಲೂರ ಮಾತನಾಡಿದರು.
ಸಾನಿಧ್ಯವನ್ನು ಬಸವನಬಾಗೇವಾಡಿಯ ಸಿದ್ದಲಿಂಗ ಸ್ವಾಮೀಜಿ, ಮಣೂರದ ಸಂಗಯ್ಯ ಹಿರೇಮಠ, ಜೈನಾಪೂರದ ಸಿದ್ದಲಿಂದ ಸ್ವಾಮೀಜಿ ವಹಿಸಿದ್ದರು.
ಅಧ್ಯಕ್ಷತೆಯನ್ನು ಮಣೂರ ವ್ಹಿಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ ಬಸಪ್ಪ ಕಾರಜೋಳ ವಹಿಸಿದ್ದರು. ವೇದಿಕೆಯಲ್ಲಿ ಮುಖಂಡರಾದ ಸುರೇಶ ಹಾರಿವಾಳ, ನೀಲು ನಾಯಕ, ಜಗದೀಶ ಕೊಟ್ರಶೆಟ್ಟಿ, ಕಲ್ಲು ಸೊನ್ನದ, ಪಿ.ವೈ. ಡೆಂಗಿ, ಎಸ್.ಎಂ.ಹಂಗರಗಿ, ಎಸ್.ಬಿ.ಹೊಸಮನಿ, ಜಿ.ಎ.ಈಳಗೇರ, ಯಲ್ಲಪ್ಪ ತಳೇವಾಡ, ಸಿದ್ದಣ್ಣ ಜುಗತಿ, ಸುಭಾಸಗೌಡ ಪಾಟೀಲ, ರಾಮಣ್ಣ ಹೊಸಮನಿ, ಸಂತೋಷ ಲಮಾಣಿ, ರಾಘವೇಂದ್ರ ಲಮಾಣಿ, ಸಹಕಾರಿ ಸಂಘದ ಉಪಾಧ್ಯಕ್ಷ ಮಲ್ಲಪ್ಪ ಉಣ್ಣಿಭಾವಿ, ನಿರ್ದೇಶಕರಾದ ಮಲ್ಲಿಕಾರ್ಜುನ ಜುಗತಿ, ನಾಮದೇವ ಲಮಾಣಿ, ಹಣಮಂತ ಜುಗತಿ, ನಾನಪ್ಪ ಲಮಾಣಿ, ವಿಜಯಲಕ್ಷ್ಮೀ ಹಿರೇಮಠ, ರೇಣುಕಾ ಕಲಬುರ್ಕಿ ಇತರರು ಇದ್ದರು. ವೈ.ಸಿ.ಕಾರಜೋಳ ಸ್ವಾಗತಿಸಿದರು. ಎಚ್.ಬಿ.ಬಾರಿಕಾಯಿ ಪ್ರಾಸ್ತವಿಕವಾಗಿ ಮಾತನಾಡಿ, ನಿರೂಪಿಸಿದರು. ರಾಜು ಹೊಸಮನಿ ವಂದಿಸಿದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.