ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಸಂಜೆ ಸೇರಿದ ಕಾರ್ಯಕರ್ತರು ಪಕ್ಷದ ಜಯವನ್ನು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಪ್ರಕೋಷ್ಟ ಸಂಚಾಲಕ ಭೀಮನಗೌಡ ಲಚ್ಯಾಣ, ಮಂಡಲದ ಖಜಾಂಚಿ ಸೋಮಶೇಖರ ಮಾತನಾಡಿ, ದೆಹಲಿಯಲ್ಲಿ ಬಿಜೆಪಿಯ ೨೭ ವರ್ಷಗಳ ವನವಾಸ ಕೊನೆಗೊಳ್ಳುವುದರ ಮೂಲಕ ಪ್ರಧಾನಿ ಮೋದಿ ಹಾಗೂ ಅಮೀತ್ ಶಾ ಅವರ ಬಹುದಿನದ ಕನಸು ನನಸಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೂ ಸ್ಥಾನ ನೀಡದೇ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ ದೆಹಲಿ ಮತದಾರರು ಉತ್ತಮ ಕಾರ್ಯವನ್ನೇ ಮಾಡಿದ್ದಾರೆ. ಅವರಿಗೆ ಧನ್ಯವಾದಗಳು ಎಂದರು.
ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಜಲಕತ್ತಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದಾರ, ರಾವುತ ಅಗಸರ, ರಮೇಶ ಈಳಗೇರ, ಕಲ್ಮೇಶ ಬುದ್ನಿ, ಶ್ರೀಶೈಲ ಯಂಭತ್ನಾಳ, ಸೋಮು ದೇವೂರ, ಬಸವರಾಜ ದೇವಣಗಾಂವ, ಕಾಶೀನಾಥ ಕಡ್ಲೇವಾಡ, ರಮೇಶ ಹಂಚಲಿ, ಶ್ರೀಧರ ನಾಡಗೌಡ , ಜಗದೀಶ ಚವ್ಹಾಣ ಸೇರಿದಂತೆ ಇತರರು ಇದ್ದರು.

