ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪಟ್ಟಣ ಪಂಚಾಯತ ನಾಲತವಾಡ ಇವರ ಸಂಯುಕ್ತಾಶ್ರಯದಲ್ಲಿ “ಕೇಂದ್ರ ಪುರಸ್ಕೃತ ಅಮೃತ್ ೨.೦ ಯೋಜನೆಯಡಿ ನಾಲತವಾಡ ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ವಿತರಣಾ ವ್ಯವಸ್ಥೆ ಕಲ್ಪಿಸುವ ಯೋಜನೆ” ಗಾಗಿ ನಾಲತವಾಡದ ಬಸವೇಶ್ವರ ಸರ್ಕಲ್ ಹತ್ತಿರ ಭೂಮಿ ಪೂಜೆ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ಭೂಮಿ ಪೂಜೆ ನೆರವೆರಿಸಲಿದ್ದಾರೆ.
ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷ ಹಾಗೂ ಮತಕ್ಷೇತ್ರ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ನವದೆಹಲಿ ಕರ್ನಾಟಕ ವಿಶೇಷ ಪ್ರತಿನಿಧಿ-೨ ಹಾಗೂ ವಿಧಾನ ಪರಿಷತ್ ಶಾಸಕರಾದ ಪ್ರಕಾಶ ಬಿ. ಹುಕ್ಕೇರಿ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಆದ ಧಾರವಾಡ ಮತಕ್ಷೇತ್ರ ಶಾಸಕರಾದ ವಿನಯ ಕುಲಕರ್ಣಿ, ಸಂಸದರಾದ ರಮೇಶ ಚಂ. ಜಿಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯು ತಿಳಿಸಿದೆ.

