Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ, ಭಯ ಬೇಡ : ಡಾ.ಕೋಟೆಣ್ಣವರ
(ರಾಜ್ಯ ) ಜಿಲ್ಲೆ

ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ, ಭಯ ಬೇಡ : ಡಾ.ಕೋಟೆಣ್ಣವರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ. ಆದರೆ ಭಯ ಬೇಡ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ.
ಶನಿವಾರ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಕ್ಯಾನ್ಸರ್ ರೋಗ ತಪಾಸಣೆ ಮತ್ತು ಜಾಗೃತಿ ಅಭಿಯಾನ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಜನಸಾಮಾನ್ಯರಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ತಿಳಉವಳಿಕೆ ಮೂಡಿಸಲು ಪ್ರತಿ ವರ್ಷ ವಿಶ್ವದಾದ್ಯಂತ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಗುತ್ತದೆ. ಕ್ಯಾನ್ಸರ್ ರೋಗಕ್ಕೆ ಸಂಬಂಧಿಸಿದಂತೆ ಈಗಲೂ ಸಾಕಷ್ಟು ಮೂಢನಂಬಿಕೆಗಳು ಪ್ರಚಲಿತದಲ್ಲಿವೆ. ಅದರ ಬಗ್ಗೆ ಎಚ್ಚರವಿರಬೇಕು. ಆದರೆ, ಭಯ ಬೇಡ ಎಂದು ಅವರು ಹೇಳಿದರು.
ಬಿ. ಎಲ್. ಡಿ. ಇ. ಆಸ್ಪತ್ರೆಯಲ್ಲಿ ಎಲ್ಲಾ ಬಗೆಯ ಕ್ಯಾನ್ಸರ್ ರೋಗಗಗಳನ್ನು ಕಂಡು ಹಿಡಿಯುವ ಸಾಧನಗಳಿವೆ. ಸಂಪೂರ್ಣ ಚಿಕಿತ್ಸೆಗಳು ಉಚಿತವಾಗಿ ಅಥವಾ ಅತಿ ಕಡಿಮೆ ದರದಲ್ಲಿ ಲಭ್ಯವಿವೆ. ನಾನಾ ಪರಿಣಿತ ತಜ್ಞ ವೈದ್ಯರು ಸೇವೆಯೂ ಇದೆ. ಮುಂಚಿನಂತೆ ಕ್ಯಾನ್ಸರ್ ರೋಗ ಚಿಕಿತ್ಸೆಗಾಗಿ ಮುಂಬೈ, ಬೆಂಗಳೂರಿನಂಥ ದೊಡ್ಡ ಊರುಗಳಿಗೆ ಅಲೆದಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ಕ್ಯಾನ್ಸರ್ ಶಸ್ತ್ರ ಚಿಕಿತ್ಸಕ ಡಾ. ಸಂಜೀವ ರಾಠೋಡ ಮಾತನಾಡಿ, ಕ್ಯಾನ್ಸರ್ ರೋಗವು ಸಾಮಾನ್ಯವಾಗಿ ದುಶ್ಚಟಗಳಾದ ತಂಬಾಕು, ಧೂಮಪಾನ, ಸಾರಾಯಿ ಸೇವನೆಗಳಿಂದ ಮತ್ತು ಅಸಾಮಾನ್ಯವಾಗಿ ಅನುವಂಶಿಕವಾಗಿ ಬರುತ್ತವೆ. ಆದ್ದರಿಂದ ಇಂಥ ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಜೀವನಶೈಲಿ ಪಾಲಿಸಲು ಸಲಹೆ ನೀಡಿದರು.
ಕ್ಯಾನ್ಸರ್ ಶಸ್ತ್ರ ಚಿಕಿತ್ಸಕ ಡಾ. ಶೈಲೇಶ ಕನ್ನೂರ ಮಾತನಾಡಿ, ನಾನಾ ಸಾಮಾನ್ಯ ಕ್ಯಾನ್ಸರ್ ರೋಗಗಳ ಗುಣಲಕ್ಷಣಗಳು, ಅವುಗಳನ್ನು ಕಂಡು ಹಿಡಿಯುವ ವಿಧಾನ ಹಾಗೂ ಚಿಕಿತ್ಸೆ ಪದ್ಧತಿಗಳನ್ನು ವಿವರಿಸಿದರು. ಅಲ್ಲದೇ, ಕ್ಯಾನ್ಸರ್ ರೋಗದ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ, ನಿರ್ಲಕ್ಷ್ಯಿಸದೆ, ತಜ್ಞ ವೈದ್ಯರನ್ನು ಕಾಣಲು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ, ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಡೀನ್ ಫ್ಯಾಕಲ್ಟಿ ಆಫ್ ಮೆಡಿಸಿನ್ ಡಾ. ತೇಜಸ್ವಿನಿ ವಲ್ಲಭ, ಡಾ. ವಿಜಯಾ ಪಾಟೀಲ, ಡಾ. ಗಿರೀಶ ಕುಲ್ಲೊಳ್ಳಿ, ಡಾ. ಎಸ್. ಎಸ್. ಪಾಟೀಲ, ಡಾ. ಮಂಜುನಾಥ ಸಾವಂತ, ಡಾ. ವಿಜಯ ಈಶ್ವರಪ್ಪಗೋಳ, ಡಾ. ನಾಗರಾಜ ಬಿರಾದಾರ, ಡಾ. ವೀಣಾ ಘಂಟೆಪ್ಪಗೋಳ ಮುಂತಾದವರು ಉಪಸ್ಥಿತರಿದ್ದರು.
ಕಳೆದ ಸೋಮವಾರದಿಂದ ಶನಿವಾರದ ವರೆಗೆ ನಡೆದ ಸಪ್ತಾಹದಲ್ಲಿ ಸುಮಾರು 200 ಕ್ಕೂ ಹೆಚ್ಚು ಕ್ಯಾನ್ಸರ್ ಲಕ್ಷಣವಿರುವ ರೋಗಿಗಳನ್ನು ಉಚಿತವಾಗಿ ತಪಾಸಣೆ ಮಾಡಿ, ಅವಶ್ಯ ಸಲಹೆ ಮತ್ತು ಚಿಕಿತ್ಸೆ ನೀಡಲಾಯಿತು. 25 ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು.
ಕಾಲೇಜಿನ ವೈಜ್ಞಾನಿಕ, ಶೈಕ್ಷಣಿಕ ಮತ್ತು ಸಂಶೋಧನಾ ಸೊಸೈಟಿ (SARS) ಸಹಯೋಗದೊಂದಿಗೆ ವಿಜಯಪುರದ ವೈದ್ಯಕೀಯ ಮಹಾವಿದ್ಯಾಲಯಗಳ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ, ಈ ವರ್ಷದ ಕ್ಯಾನ್ಸರ್ ರೋಗ ದಿನಾಚರಣೆಯ ಅನನ್ಯತೆಯಿಂದ ಒಂದುಗೂಡಿದೆ ಎಂಬ ಧ್ಯೇಯ ವಾಕ್ಯದ ಮೇಲೆ ಆಯೋಜಿಸಿದ್ದ ನಿಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳಲ್ಲಿ ಸುಮಾರು 35 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಜೇತರಿಗೆ ಬಹುಮಾನಗಳನ್ನು ಮುಂದಿನ ವೈಜ್ಞಾನಿಕ ಮತ್ತು ಶೈಕ್ಷಣಿಕ ಸಂಶೋಧನೆ ಸೊಸೈಟಿ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ಸೊಸೈಟಿಯ ಅಧ್ಯಕ್ಷೆ ಡಾ. ಎಚ್. ಟಿ. ಲತಾದೇವಿ ಮಾಹಿತಿ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.