Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಶಶಿಕಾಂತ ಪಟ್ಟಣ ಅವರಿಗೆ “ಶರಣ ಸೇವಾ ಪುರಸ್ಕಾರ”
(ರಾಜ್ಯ ) ಜಿಲ್ಲೆ

ಡಾ.ಶಶಿಕಾಂತ ಪಟ್ಟಣ ಅವರಿಗೆ “ಶರಣ ಸೇವಾ ಪುರಸ್ಕಾರ”

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬೆಳಗಾವಿ: ಬಸವಾದಿ ಶರಣರ ವಚನಗಳು ಮಾನವನ ಬದುಕಿನ ದಾರಿಯಲ್ಲಿ ಹಚ್ಚಿಟ್ಟ ದೀಪಗಳು. ಸಮಾನತೆ, ಸಹಕಾರ- ಸಹಬಾಳ್ವೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯತೆಯ ಧರ್ಮದ ನುಡಿ ರಚನೆಗಳು. 12ನೇ ಶತಮಾನದ ಶರಣರ ಸ್ವಾನುಭಾವದಿಂದ ಮೂಡಿಬಂದಿರುವ ಈ ಶ್ರೇಷ್ಠ ನುಡಿಗಳು ಇಂದು ನಮಗೆ ಉಳಿದು ಬಂದಿದ್ದೆ ರೋಚಕದ ಸಂಗತಿ. ಶರಣರ ಬಲಿದಾನ ಹಾಗೂ ವೀರಗಾಥೆಯ ಕಾರ್ಯಗಳಿಂದ ಉಳಿದು ಬಂದಿರುವ ವಚನಗಳ ಸಂರಕ್ಷಣೆಯ ಸ್ಮರಣೆಯಲ್ಲಿ ಬೀದರ್ ನಲ್ಲಿ 2002ರಲ್ಲಿ ಸಂಸ್ಥಾಪನೆಗೊಂಡ ಬಸವ ಸೇವಾ ಪ್ರತಿಷ್ಠಾನವು ಬಸವ ತತ್ವ ಪ್ರಸಾರ, ಪ್ರಚಾರ ಹಾಗೂ ವಚನಗಳ ಆಶಯಗಳನ್ನು ಬಸವಜ್ಯೋತಿ, ಶರಣ ಸಂಗಮ, ಮಹಾಮನೆ, ಸಾಹಿತ್ಯ ರಚನೆ ಹಾಗೂ ರಾಜ್ಯ, ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ವಚನ ವಿಜಯೋತ್ಸವ ಕಾರ್ಯಕ್ರಮಗಳ ಮೂಲಕ ತಮ್ಮ ಸಹಕಾರದಿಂದ ನಾಡಿನ ಜನಮನದಲ್ಲಿ ಬಿತ್ತುತ್ತಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗದ ಸ್ವಾತಂತ್ರ್ಯ ಹೋರಾಟಗಾರರ ಮನೆತನದಲ್ಲಿ ಜನಿಸಿದ ಡಾ. ಶಶಿಕಾಂತ್ ಪಟ್ಟಣ ಅವರು ರಾಮದುರ್ಗ, ಸೈನಿಕ ಶಾಲೆ ವಿಜಯಪುರ, ಧಾರವಾಡಗಳಲ್ಲಿ ಪ್ರಾಥಮಿಕ ಹಾಗೂ ಪಿಯುಸಿ ಶಿಕ್ಷಣ ಪಡೆದು ಮುಂದೆ ಬೆಳಗಾವಿಯ ಜೆ. ಎನ್.ಎಂ.ಸಿ ಮೆಡಿಕಲ್ ಕಾಲೇಜಿನಲ್ಲಿ ಬಿ. ಫಾರ್ಮ್ ಹಾಗೂ ಎಂ. ಫಾರ್ಮ್ ಪದವಿಯನ್ನು ಮುಗಿಸಿ ಅಲ್ಲಿಯೇ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಔಷಧಿ ವಿಜ್ಞಾನದಲ್ಲಿ ಪಿ. ಎಚ್. ಡಿ ಪದವಿಯನ್ನು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಿಂದ ಪಡೆದುಕೊಂಡು, ಕೆ. ಎಲ್. ಇ ಸಂಸ್ಥೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ, ಮಹಾರಾಷ್ಟ್ರದ ಪುಣೆಯ ಫಾರ್ಮಸಿ ಕಾಲೇಜಿನಲ್ಲಿ ಪ್ರಾಚಾರ್ಯ ರಾಗಿ ಕಳೆದ 12 ವರ್ಷಗಳವರಗೆ ಸೇವೆ ಸಲ್ಲಿಸಿ, ಈಗ ಸಧ್ಯ ಕನ್ನಡ ಸಾಹಿತ್ಯದಲ್ಲಿ ಗಮನಾರ್ಹ ಕಾರ್ಯ ಮಾಡಿದ್ದಾರೆ. . ಕನ್ನಡ, ಮರಾಠಿ ಭಾಷಾ ಬಾಂಧವ್ಯದ ಬೆಳವಣಿಗೆಯನ್ನು ಸಮತೋಲನಗೊಳಿಸುವುದರ ಮೂಲಕ ಜನಾನುರಾಗಿಯಾಗಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದಿದ್ದರೂ, ಅವರ ಕನ್ನಡ ಪ್ರೀತಿ ಅನುಪಮವಾಗಿದೆ. ಪ್ರಮುಖವಾಗಿ ಕವಿಯಾಗಿರುವ ಅವರು ಈಗಾಗಲೇ ಸಂಪಾದನೆ ಸೇರಿ 57 ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ವಚನ ಸಾಹಿತ್ಯದ ಸೃಜನಶೀಲ ಬರಹಗಾರರಾಗಿ, ಸಂಶೋಧಕರಾಗಿ ಉತ್ತಮ ವಾಗ್ಮಿಗಳಾಗಿ, ಬಂಡಾಯ ಧೋರಣೆಯ ಲೇಖಕರಾಗಿ ಜನಮನ ಸೂರೆಗೊಂಡಿದ್ದಾರೆ.
ಬಸವ ಸೇವಾ ಪ್ರತಿಷ್ಟಾನ- ಬಸವಗಿರಿ -ಬೀದರ ಇದರ ಅಧ್ಯಕ್ಷರಾದ ಪೂಜ್ಯ ಡಾ. ಗಂಗಾoಬಿಕಾ ಅಕ್ಕ ಅವರು
ಡಾ. ಶಶಿಕಾಂತ ಪಟ್ಟಣ -ಅಧ್ಯಕ್ಷರು ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಅವರಿಗೆ ಬಸವ ತತ್ವ ಪ್ರಸಾರ, ಪ್ರಚಾರ, ಸಾಹಿತ್ಯ ಸೇವೆ ಹಾಗೂ ಸಂಘಟನಾ ಚತುರತೆಗೆ ಶುಭ ಹಾರೈಸಿ, 23ನೆಯ ವಿಜಯೋತ್ಸವ ಕಾರ್ಯಕ್ರಮದಲ್ಲಿ ” ಶರಣ ಸೇವಾ ಪ್ರಶಸ್ತಿ ಪುರಸ್ಕಾರ ” ನೀಡಿ ಗೌರವಿಸಿದ್ದಾರೆ ಎಂದು ಅಕ್ಕನ ಅರಿವು ಮತ್ತು ವಚನ ಅಧ್ಯಯನ ವೇದಿಕೆಯ ಆಜೀವ ಸದಸ್ಯರು, ದತ್ತಿ ದಾಸೋಹಿಗಳು, ವಿಶ್ವಸ್ಥರಾದ ಪ್ರೊ. ಶಾರದಾ ಪಾಟೀಲ್, ಶರಣ ಶಿವಾನಂದ ಕಲಕೇರಿ, ಡಾ. ಉಮಾಕಾಂತ ಶೇಟ್ಕರ ಮತ್ತು ಸುಧಾ ಪಾಟೀಲ ಅವರು
ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.