Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಂತ್ರಜ್ಞಾನದ ಸಮರ್ಪಕ ಬಳಕೆಗೆ ಅರಿವು ಅಗತ್ಯ :ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ತಂತ್ರಜ್ಞಾನದ ಸಮರ್ಪಕ ಬಳಕೆಗೆ ಅರಿವು ಅಗತ್ಯ :ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಂತರ್ಜಾಲವು ಒಂದು ಶಕ್ತಿಯುತ ಸಾಧನವಾಗಿದೆ. ಸರಿಯಾದ ಬಳಕೆಯು ಜೀವನವನ್ನು ಸುಲಭಗೊಳಿಸಬಹುದಾಗಿದ್ದು, ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸಬೇಕು. ಸಮರ್ಪಕ ಬಳಕೆಗೆ ಅರಿವು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಂಯುಕ್ತಾಶ್ರದಲ್ಲಿ ಹಮ್ಮಿಕೊಂಡಿದ್ದ ಸುರಕ್ಷಿತ ಅಂತರ್ಜಾಲ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಧುನಿಕ ಜಗತ್ತಿನಲ್ಲಿ ಅಂತರ್ಜಾಲವು ಮಾನವ ಬದುಕಿನ ಅವಿಭಾಜ ಅಂಗವಾಗಿದೆ. ಇದರ ನಡುವೆಯೇ ವಿವಿಧ ಮಾದರಿಗಳಲ್ಲಿ ಸೈಬರ್ ವಂಚನೆ ನಡೆಯುತ್ತಿದೆ. ಸೈಬರ್ ವಂಚನೆಗಳನ್ನು ತಡೆಗಟ್ಟಲು ಸಾರ್ವಜನಿಕರು ಜಾಗೃತಿ ಹೊಂದಬೇಕು. ದತ್ತಾಂಶ ಹಾಗೂ ಮಾಹಿತಿಯ ಸಂರಕ್ಷಣೆಯ ಅರಿವು ಹೊಂದುವುದು ಅತ್ಯವಶ್ಯಕವಾಗಿದೆ. ಸಮರ್ಪಕವಾಗಿ ಅರಿವು ಹೊಂದಿದಾಗ ಮಾತ್ರ ಸೈಬರ್ ವಂಚನೆಯನ್ನು ತಪ್ಪಿಸಬಹುದಾಗಿದೆ ಎಂದು ಹೇಳಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಗಳಲ್ಲಿ ತಮ್ಮ ವೈಯಕ್ತಿಕ ಲಾಗಿನ್‌ಗಳ ಬಗ್ಗೆ ಅರಿವು ಹೊಂದಿ ಸುರಕ್ಷಿತವಾಗಿರುವುದನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಬೇರೆಯವರಿಗೆ ಮಾಹಿತಿ ಹಂಚಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಅಂತರಜಾಲಯು ಮಾಹಿತಿಯ ಆಗರವಿದ್ದು, ಅದರ ಬಳಕೆ ಕುರಿತು ಸ್ವಯಂ ಅರಿವು ಹೊಂದಬೇಕು ಎಂದು ತಿಳಿಸಿದ ಅವರು, ಸೈಬರ್ ಅಪರಾಧಗಳ ಕುರಿತಾಗಿ ಗ್ರಾಮೀಣ ಭಾಗದ ಜನರಿಗೆ ಸೂಕ್ತ ತಿಳುವಳಿಕೆ ನೀಡುವ ಜನಜಾಗೃತಿ ಕಾರ್ಯಕ್ರಮ ಜಿಲ್ಲೆಯಲ್ಲಿ ಹಮ್ಮಿಕೊಂಡು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲಾಗುವುದು ಎಂದು ಅವರು ಹೇಳಿದರು.
ಇಂದಿನ ತಂತ್ರಜ್ಞಾನದ ಯುಗದಲ್ಲಿ ಪ್ರತಿಯೊಬ್ಬರು ಯಾವುದಾದರೊಂದು ತಂತ್ರಜ್ಞಾನದ ಬಳಕೆ ದಿನನಿತ್ಯ ಮಾಡುತ್ತಿದ್ದಾರೆ. ಇದರ ಸಮರ್ಪಕ ಬಳಕೆಯಾಗಬೇಕು. ಇದರ ದುರುಪಯೋಗವಾಗದಂತೆ, ಯಾವುದೇ ಸೈಬರ್ ವಂಚನೆಗಳಿಗೆ ಅವಕಾಶ ನೀಡದೇ, ಮೊಬೈಲ್ ಸೇರಿದಂತೆ ತಂತ್ರಜ್ಞಾನದ ಸೂಕ್ತ ಅರಿವು-ತಿಳುವಳಿಕೆ ಹೊಂದಬೇಕು. ಸಂಶಯಾಸ್ಪದ ಕರೆಗಳಿಗೆ ಸ್ಪಂದಿಸದೇ, ಯಾವುದೇ ವೈಯಕ್ತಿಕ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು. ತಂತ್ರಜ್ಞಾನದ ಸಂಪೂರ್ಣ ಮಾಹಿತಿಯನ್ನು ಅರಿತುಕೊಂಡು ಜಾಗರೂಕತೆಯಿಂದ, ಸಮರ್ಪಕವಾಗಿ ಬಳಕೆ ಮಾಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಅಲ್ತಾಬ್ ಬಾಲಸಿಂಗ್ ಅವರು ಮಾತನಾಡಿ, ಯಾವುದೇ ರೀತಿ ಸೈಬರ್ ವಂಚನೆಗೆ ಗುರಿಯಾದಲ್ಲಿ ಸಹಾಯವಾಣಿ ೧೯೩೦ಗೆ ಕರೆ ಮಾಡಿ ದೂರು ಸಲ್ಲಿಸಬಹುದು ಹಾಗೂ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಬಹುದು.ಇದೇ ಸಂದರ್ಭದಲ್ಲಿ ತಿತಿತಿ.ಛಿಥಿbeಡಿಛಿಡಿime.gov.iಟಿ ವೆಬ್ ಸೈಟ್ ನಲ್ಲಿ ದೂರು ನೀಡುವುದರ ಬಗ್ಗೆ ವಿವರಿಸಿದರು.
ದಿನನಿತ್ಯದ ಜೀವನದಲ್ಲಿ ಇಂಟರ್‌ನೆಟ್ ಬಳಕೆ, ಅದರ ಸಾಧಕ-ಬಾಧಕಗಳು, ಸೈಬರ್ ವಂಚನೆಗಳು, ವಂಚನೆಗೊಳಗಾಗದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಮೋಸ ಹೋಗದಂತೆ ಮುನ್ನೆಚ್ಚೆರಿಕೆ ಕ್ರಮಗಳ ಕುರಿತು ಪಿಪಿಟಿ ಮೂಲಕ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಯೋಜನಾ ನಿರ್ದೇಶಕ ಬಿ.ಎಸ್.ರಾಠೋಡ, ಮುಖ್ಯ ಲೆಕ್ಕಪತ್ರಾಧಿಕಾರಿ ರಾಮಣ್ಣ ಅಥಣಿ, ಎನ್‌ಐಸಿ ಅಧಿಕಾರಿ ಶಿವಾನಂದ ಗೂಗವಾಡ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಂತರ್‌ಜಾಲ ಜಾಗೃತಿ ಕುರಿತ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.