ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿರುವ ನೊಂದಾಯಿತ ಸಹಕಾರ ಸಂಘಗಳು ೨೦೨೩-೨೪ನೇ ಸಾಲಿನ ಲೆಕ್ಕಪರಿಶೋಧನೆಗೆ ಈವರೆಗೂ ಠರಾವನ್ನು ಸಲ್ಲಿಸದ ಸಹಕಾರ ಸಂಘಗಳು ಈ ಪ್ರಕಟಣೆಯ ೭ ದಿನಗಳೊಳಗಾಗಿ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರನ್ನು-ಲೆಕ್ಕಪರಿಶೋಧನಾ ಫರ್ಮನ್ನು ನೇಮಕಾತಿ ಮಾಡಿಕೊಂಡು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷರ ಸಹಿಯೊಂದಿಗೆ ಮಾಹಿತಿಯನ್ನು ಜಂಟಿ ನಿರ್ದೇಶಕರ ಕಚೇರಿ, ಲೆಕ್ಕಪರಿಶೋಧನಾ ಇಲಾಖೆ, ಕಾರ್ಮಿಕ ಇಲಾಖಾ ಕಟ್ಟಡ, ಸಿಂದಗಿ ನಾಕಾ ಹತ್ತಿರ, ಅಲ್ಲಾಪೂರ ಓಣಿ, ವಿಜಯಪುರ ಕಚೇರಿಗೆ ಸಲ್ಲಿಸುವಂತೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೫೧೯೩೭ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
