ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅನಾಮಧೇಯ ಅಂದಾಜು ೪೫ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತ ವಿಜಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಸಾರ್ವಜನಿಕರಲ್ಲಿ ಸಂಚಾರಿ ಪೊಲೀಸ್ ಠಾಣೆ ಇನ್ಸಪೆಕ್ಟರ್ ಅವರು ಮನವಿ ಮಾಡಿದ್ದಾರೆ.
ಪತ್ತೆಯಾದ ವ್ಯಕ್ತಿಯು ೪.೮ ಪೂಟ್ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ಸೀದಾ ಮೂಗು ಹೊಂದಿದ್ದು, ನೀಲಿ ಬಣ್ಣದ ನೈಟ್ ಪ್ಯಾಂಟ್, ತಿಳಿ ನೀಲಿ ಬಣ್ಣದ ಕುರ್ತಾ ಧರಿಸಿರುತ್ತಾನೆ.
ಈ ಚಹರೆಪಟ್ಟಿಯುಳ್ಳ ವ್ಯಕ್ತಿಯ ವಾರಸುದಾರರು ಪತ್ತೆಯಾದಲ್ಲಿ ಸಾರ್ವಜನಿಕರು ಜಿಲ್ಲೆಯ ಡಿ.ಎಸ್.ಪಿ ಮೊಬೈಲ್ ನಂಬರ್ ೯೪೮೦೮೦೪೨೨೦, ವಿಜಯಪುರ ಸಂಚಾರಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ ೦೮೩೫೨-೨೫೨೬೦೦ ಹಾಗೂ ೯೪೮೦೮೦೪೨೪೬, ವಿಜಯಪುರ ಕಂಟ್ರೋಲ್ ರೂಮ್ ದೂರವಾಣಿ ನಂಬರ್ ೦೮೩೫೨-೨೫೦೮೪೪ ಸಂಪರ್ಕಿಸಬಹುದು ಎಂದು ಸಂಚಾರಿ ಪೊಲೀಸ್ ಠಾಣೆ ಇನ್ಸಪೆಕ್ಟರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.