ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ತಾರನಾಳ ಗ್ರಾಮದ ಚಂದ್ರಶೇಖರ ಮಾಳಳ್ಳಿ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಜಿ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ರೈತರ ಮಗನಾದ ಚಂದ್ರಶೇಖರ ಬೆಂಗಳೂರಿನ ಬಿಎಂಎಸ್ ಇಂಜನೀಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಸೈನ್ಸ್ ವಿಷಯದಲ್ಲಿ ಸಂಶೋಧನೆ ಮಾಡಿದ್ದರ ಪ್ರಯುಕ್ತ ಈ ಪದವಿ ಲಭಿಸಿದೆ.