Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತ್ಯಾಗ ಮತ್ತು ಕರುಣೆಯಿಂದ ದೇವರ ಒಲುಮೆ :ದಿಂಗಾಲೇಶ್ವರ ಶ್ರೀ
(ರಾಜ್ಯ ) ಜಿಲ್ಲೆ

ತ್ಯಾಗ ಮತ್ತು ಕರುಣೆಯಿಂದ ದೇವರ ಒಲುಮೆ :ದಿಂಗಾಲೇಶ್ವರ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ದೇವರ ಒಲುಮೆ ಪಡೆದುಕೊಳ್ಳಲು ಹಲವಾರು ಮಾರ್ಗಗಳಿದ್ದು, ಅವುಗಳಲ್ಲಿ ತ್ಯಾಗ ಮತ್ತು ಕರುಣೆ ಉತ್ತಮವಾದದ್ದು ಎಂದು ಶಿರಹಟ್ಟಿ ಭಾವೈಕ್ಯತೆ ಸಂಸ್ಥಾನಮಠದ ಶ್ರೀಫಕೀರ ದಿಂಗಾಲೇಶ್ವರ ಜಗದ್ಗುರು ಹೇಳಿದರು.
ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದ ಶ್ರೀಮಡಿವಾಳೇಶ್ವರ ಗದ್ದಿಗಿಮಠದಲ್ಲಿ ಲಿಂ.ಸಿದ್ದಲಿಂಗ ಮಹಾಶಿವಯೋಗಿಗಳ ೩೧ನೇ ಪುಣ್ಯ ಸ್ಮರಣೋತ್ಸವ ಹಾಗೂ ಮಡಿವಾಳೇಶ್ವರ ಮಹಾಸ್ವಾಮಿಗಳವರ ೧೭ನೆಯ ಪಟ್ಟಾಧಿಕಾರದ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ಬಸವ ಪುರಾಣ ಕಾರ್ಯಕ್ರಮದಲ್ಲಿ ಶಿರಹಟ್ಟಿ ಭಾವೈಕ್ಯತೆ ಸಂಸ್ಥಾನಮಠದ ಶ್ರೀಫಕೀರ ದಿಂಗಾಲೇಶ್ವರ ಜಗದ್ಗುರು ಆಶೀರ್ವಚನ ನೀಡಿ ಮಾತನಾಡಿದ ಅವರು, ಮಹಾತ್ಮರ ಚರಿತ್ರೆಗಳನ್ನು ಆಲಿಸುವುದರ ಮೂಲಕ ಜೀವನದಲ್ಲಿ ಆದ್ಯಾತ್ಮಿಕ ಮತ್ತು ನೈತಿಕ ಚಿಂತನೆ ಅಳವಡಿಸಿಕೊಳ್ಳಬೇಕು. ಮಾನವ ಜನ್ಮ ಶಾಶ್ವತವಲ್ಲ. ಆದರೆ ಜೀವ ಸಂಕುಲದಲ್ಲಿ ಮಾನವ ಜನ್ಮಕ್ಕೆ ಶ್ರೇಷ್ಠ ಸ್ಥಾನವಿದೆ. ದುಡಿಮೆಯಲ್ಲಿ ಸಾಧ್ಯವಾದಷ್ಟು ದಾನ, ಧರ್ಮ ಮಾಡಿ ಸಮೃದ್ಧಿಯ ಬದುಕು ಸಾಗಿಸಬೇಕು. ಶರಣರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಗುರುವಿನ ಸ್ಮರಣೆ ಮಾಡಬೇಕು ಎಂದರು.
ಈ ವೇಳೆ ಮಸಬಿನಾಳ ದಾಸೋಹಮಠದ ಸಿದ್ದರಾಮ ಮಹಾಸ್ವಾಮಿಗಳು, ಮಮದಾಪುರ ವಿರಕ್ತಮಠದ ಮುರುಗೇಂದ್ರ ಮಹಾಸ್ವಾಮಿಗಳು, ಶ್ರೀಮಠದ ಮಡಿವಾಳೇಶ್ವರ ಮಹಾಸ್ವಾಮಿಗಳು, ಬಿಳಗಿಯ ಸಂಗನಬಸವ ದೇವರು ಸಮ್ಮುಖ ವಹಿಸಿದ್ದರು. ಸುಂಟನೂರಿನ ಪ್ರವಚನಕಾರ ಬಂಡಯ್ಯ ಶಾಸ್ತ್ರಿಗಳು ಬಸವ ಪುರಾಣ ಹೇಳಿದರು. ಕಲಾವಿದ ಶಿವರುದ್ರಯ್ಯ ಗವಾಯಿಗಳು ಗೌಡಗಾವ, ಮಲ್ಲಿಕಾರ್ಜುನ ನರಸಲಗಿ, ರಮೇಶ ಕಟ್ಟಿ ಸಂಗಾವಿ, ಸಿದ್ದು ಲಿಂಗನಬಂಡಿ ಸಂಗೀತ ನೀಡಿದರು. ಪುರಾಣದಲ್ಲಿ ಕಡಕೋಳ, ಇಬ್ರಾಹಿಂಪುರ, ಕೋರವಾರ ಸೇರಿದಂತೆ ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.