Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾದಕ ದ್ರವ್ಯ ಸೇವನೆ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಿ
(ರಾಜ್ಯ ) ಜಿಲ್ಲೆ

ಮಾದಕ ದ್ರವ್ಯ ಸೇವನೆ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿಯ ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ನಿರ್ಮೂಲನೆಗಾಗಿ ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಅಗತ್ಯ ಜಾಗೃತಿ- ತಿಳುವಳಿಕೆ ಮೂಡಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದಲ್ಲದೇ, ಮಾದಕ ದ್ರವ್ಯಗಳ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಾದಕ ದ್ರವ್ಯಗಳ ಪರೀಕ್ಷಾ ಕಿಟ್ (ಡ್ರಗ್ ಡಿಟೆಕ್ಸನ್ ಕಿಟ್)ಗಳನ್ನು ಜಿಲ್ಲಾ ಹಾಗೂ ತಾಲೂಕ ಆಸ್ಪತ್ರೆಯಲ್ಲಿ ಬಳಸಲು ಕ್ರಮವಹಿಸಬೇಕು. ಮಾದಕ ದ್ರವ್ಯ ಪರೀಕ್ಷೆ ನಡಸುವುದರಿಂದ ಮಾದಕ ದ್ರವ್ಯ ಸೇವನೆ ಪ್ರಮಾಣ ಕಡಿಮೆಗೊಳಿಸಬಹುದು. ದುಷ್ಪರಿಣಾಮ ತಗ್ಗಿ ಅವರು ಸುಂದರ ಜೀವನ ರೂಪಿಸಿಕೊಳ್ಳಲು ಸಹಾಯವಾಗುವುದು. ಕಿಟ್ ತರಿಸಿಕೊಳ್ಳಲು ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಉಪ ಅರಣ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೊಳಪಡುವ ಅರಣ್ಯ ಪ್ರದೇಶದಲ್ಲಿ ಮಾದಕ ದ್ರವ್ಯ ಗಾಂಜಾ ಸಸಿ, ಗಿಡಗಳು ಬೆಳೆಯದಂತೆ ನಿಗಾ ವಹಿಸಬೇಕು. ಮಾದಕ ದ್ರವ್ಯಗಳ ಸಸಿಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆ ಮಾಹಿತಿ ಒದಗಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿ ಎಸ್ ಪೊಲೀಸ್ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತ್ತಿಹೋಳಿ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

“ಔಷಧ ನಿಯಂತ್ರಕ ಇಲಾಖೆ ಮಾದಕ ಅಂಶಗಳನ್ನುಳ್ಳ ಔಷಧಿ ಮಳಿಗೆಗಳಲ್ಲಿ ಕಡ್ಡಾಯವಾಗಿ ವೈದ್ಯರ ಅನುಮತಿ ಚೀಟಿಯೊಂದಿಗೆ ಮಾರಾಟಕ್ಕೆ ಮಾತ್ರ ಅವಕಾಶ ಒದಗಿಸಬೇಕು. ಈ ಕುರಿತು ಜಿಲ್ಲೆಯಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇಡಬೇಕು. ನಿಯಮಿತವಾಗಿ ಈ ಕುರಿತು ವರದಿ ಸಲ್ಲಿಸಬೇಕು.”

– ಟಿ.ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

ಮಾದಕ ದ್ರವ್ಯ ನಿರ್ಮೂಲನೆಗೆ ಅಗತ್ಯ ಕ್ರಮ :ಎಸ್ಪಿ

ಸಬೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಮಾದಕ ದ್ರವ್ಯ ನಿರ್ಮೂಲನೆಗೆ ಸಂಬಂಧಿಸಿದ ಇಲಾಖೆಗಳ ಸಹಯೋಗ ಅಗತ್ಯವಾಗಿದ್ದು, ಇಲಾಖೆಯು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗಿದ್ದು, ಅಬಕಾರಿ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮಾರಾಟ-ಸಂಗ್ರಹಣೆ ಬಗ್ಗೆ ತೀವ್ರ ನಿಗಾ ಇಡುವಂತೆ ಅವರು ಸೂಚನೆ ನೀಡಿದರು.
ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರವು ಮಾದಕ ದ್ರವ್ಯ ನಿರ್ಮೂಲನೆಗೆ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಕುರಿತು ಪೋರ್ಟಲ್ ಸಹ ಅಭಿವೃದ್ಧಿಪಡಿಸಿರುತ್ತಾರೆ.
ಜಿಲ್ಲೆಯಾದ್ಯಂತ ಕಳೆದ ೦೩ ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ೨೦೨೩ ರಲ್ಲಿ ೨೯ ಪ್ರಕರಣಗಳನ್ನು ದಾಖಲಿಸಿ ೨೯೬ ಕೆ.ಜಿ. ೪೦೩ ಗ್ರಾಂ. ಮಾದಕ ದ್ರವ್ಯ ಜಪ್ತಿ ಮಾಡಲಾಗಿದ್ದು, ೨೦೦ ಕೆ.ಜಿ. ೪೦೦ ಗ್ರಾಂ ಗಾಂಜಾ ನಾಶಪಡಿಸಿಲಾಗಿದೆ. ಅದರಂತೆ ೨೦೨೪ನೇ ಸಾಲಿನಲ್ಲಿ ೨೮ ಪ್ರಕರಣಗಳನ್ನು ದಾಖಲಿಸಿ, ೨೯೭ ಕೆ.ಜಿ. ೮೭೨ ಗ್ರಾಂ ಗಾಂಜಾ ಜಪ್ತಿ ಮಾಡಿದ್ದು, ೩೭೩ ಕೆಜಿ ೫೭೪ ಗ್ರಾಂ ಗಾಂಜಾ ನಾಶಪಡಿಸಲಾಗಿದೆ. ೨೦೨೫ರಲ್ಲಿ ೨೮೩ ಕೆಜಿ ೮೦೮ ಗ್ರಾಂ ಗಾಂಜಾ ಹಾಗೂ ೧೮ ಕೆಜಿ ೪೩೨ ಗ್ರಾಂ ಅಫೀಮು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.