ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಕಲಚೇತನರ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಫೆ.೧೫ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಸಭೆಗೆ ಹಾಜರಾಗುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ್ ಆವರಣ, ವಿಜಯಪುರ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
