ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಸಹಕಾರಿಯಾಗುವಂತೆ ನೂತನ ವಾಹನವನ್ನು ನೀಡಲಾಗುತ್ತಿದೆ ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಇತ್ತೀಚಿಗೆ ಜರುಗಿದ ಸರಳ ಕಾರ್ಯಕ್ರಮದಲ್ಲಿ ಪಿಎಸ್‌ಐ ಬಸವರಾಜ ತಿಪ್ಪಾರೆಡ್ಡಿ ಅವರಿಗೆ ನೂತನ ವಾಹನದ ಕೀ ಹಸ್ತಾಂತರಿಸಿ ಮಾತನಾಡಿದರು.
ಪಟ್ಟಣದ ಪೊಲೀಸ್ ಇಲಾಖೆಯ ವಾಹನ ಹಳೆಯದಾಗಿದ್ದು, ಚುರುಕಿನ ಓಡಾಟಕ್ಕೆ ಸಹಕಾರ ನೀಡುತ್ತಿರಲ್ಲಿಲ್ಲ. ಆದ್ದರಿಂದ ಶಾಸಕರ ಅನುದಾನದಡಿಯಲ್ಲಿ ನೂತನ ವಾಹನ ಪೂರೈಸಿ ಅವರ ಸೇವಾ ಕಾರ್ಯಗಳಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ನೂತನ ವಾಹನಕ್ಕೆ ಮಡಿವಾಳಯ್ಯ ಹಿರೇಮಠ(ಗುಬ್ಬೇವಾಡ) ಹಾಗೂ ಪಿಎಸ್‌ಐ ಪೂಜೆ ಸಲ್ಲಿಸಿ, ಸಿಹಿ ಹಂಚಿದರು.
ತಹಶೀಲ್ದಾರ ಪ್ರಕಾಶ ಸಿಂದಗಿ, ಜೆಡಿಎಸ್ ಧುರೀಣ ಮುನೀರ್ ಅಹ್ಮದ್ ಮಳಖೇಡ ಸೇರಿದಂತೆ ಇಲಾಖೆಯ ಸಿಬ್ಬಂದಿ ಇದ್ದರು.

