ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಫೆ.೧೫ರಂದು ಮಧ್ಯಾಹ್ನ ೪ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಛೇರಿಯಲ್ಲಿ ರೈತರು ಹಾಗೂ ಗ್ರಾಹಕರೊಂದಿಗೆ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕೆ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಕಛೇರಿಗೆ ಒಳಪಡುವ ಗ್ರಾಮಗಳ ಗ್ರಾಹಕರು ಹಾಗೂ ಸಾರ್ವಜನಿಕರು ಸಂವಾದ ಸಭೆಯಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳುವಂತೆ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
