Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಬಲೇಶ್ವರ: ವಿವಿಧ ಕಾಮಗಾರಿ ಪರಿಶೀಲಿಸಿದ ಸಿಇಓ ರಿಷಿ ಆನಂದ್
(ರಾಜ್ಯ ) ಜಿಲ್ಲೆ

ಬಬಲೇಶ್ವರ: ವಿವಿಧ ಕಾಮಗಾರಿ ಪರಿಶೀಲಿಸಿದ ಸಿಇಓ ರಿಷಿ ಆನಂದ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಶುಕ್ರವಾರ ಬಬಲೇಶ್ವರ ತಾಲೂಕಿನ ಸಾರವಾಡ, ಹಲಗಣಿ ಮತ್ತು ಕಂಬಾಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಸಾರವಾಡ, ಹಲಗಣಿ ಹಾಗೂ ಕಂಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಗಳ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಸಿಬ್ಬಂದಿ-ಮಕ್ಕಳ ಹಾಜರಾತಿ, ಮಕ್ಕಳ ಆರೋಗ್ಯ ತಪಾಸಣಾ ವರದಿಗಳನ್ನು ಪರಿಶೀಲಿಸಿ, ಅಂಗನವಾಡಿ ಕೇಂದ್ರಕ್ಕೆ ಪೇಂಟಿಂಗ್ ಮತ್ತು ಗೋಡೆ ಮೇಲೆ ಮಕ್ಕಳಿಗೆ ಆಕರ್ಷಣೀಯವಾಗುವಂತೆ ಕಾರ್ಟೂನ್ ಚಿತ್ರಗಳನ್ನು ಬರೆಯಿಸಬೇಕು, ವಿದ್ಯುತ್ ವ್ಯವಸ್ಥೆ, ೧೫ ನೇ ಹಣಕಾಸಿನ ಯೋಜನೆಯ ಅನುದಾನವನ್ನು ಬಳಸಿ ಕೇಂದ್ರದ ಮಕ್ಕಳಿಗೆ ಆಟಿಕೆ ಸಾಮಗ್ರಿಗಳನ್ನು ಹಾಗೂ ಅಡುಗೆ ದಾಸ್ತಾನು ಸಂಗ್ರಹಿಸಲು ಕಂಟೇನರ್ ಖರೀದಿಸುವಂತೆ ಅವರು ಸೂಚನೆ ನೀಡಿದರು.
ಮದಗುಣಕಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಂಗನವಾಡಿ ಕೇಂದ್ರದ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಕ್ಕಳು ಹಾಡಿದ ವಿವಿಧ ಬಗೆಯ ಹಾಡುಗಳನ್ನು ಆಲಿಸಿದ ಸಿಇಓರವರು ಮಕ್ಕಳ ಪ್ರತಿಭೆಗೆ ಹರ್ಷ ವ್ಯಕ್ತಪಡಿಸಿದರು.
ಸಾರವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ವೀಕ್ಷಿಸಿ ಕಾಮಗಾರಿ ಕಡತದಲ್ಲಿರುವ ದಾಖಲಾತಿಗಳನ್ನು ಪರಿಶೀಲಿಸಿದರು.
ಕಂಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಿಕಿತ್ಸೆಗೆ ಆಗಮಿಸಿದ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆಗಳ ಕುರಿತು ಚರ್ಚಿಸಿದರು. ಆಸ್ಪತ್ರೆಯ ಔಷಧ ಸಂಗ್ರಹಾಲಯವನ್ನು ವೀಕ್ಷಣೆ ಮಾಡಿ, ಪ್ರತಿ ತಿಂಗಳು ಸ್ಟಾಕ್ ರಿಜಿಸ್ಟರ್ ವಹಿಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಆಸ್ಪತ್ರೆಯ ಒಳಾಂಗಣ ಮತ್ತು ಹೊರಾಂಗಣ ಆವರಣಗಳನ್ನು ಪ್ರತಿನಿತ್ಯ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಅಲ್ಲಿನ ವೈದ್ಯಾಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಅಜೂರ, ಬಬಲೇಶ್ವರ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜೆ. ಎಸ್. ಪಠಾಣ, ಸಹಾಯಕ ನಿರ್ದೆಶಕರು(ಗ್ರಾ.ಉ) ವ್ಹಿ. ಎಸ್. ಹಿರೇಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನೀಲ ಹಳ್ಳಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಪಿ. ಎಸ್. ಹೊಸಮನಿ, ಸಾರವಾಡ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮಲ್ಲಣ್ಣಗೌಡ ಪಾಟೀಲ, ಚುನಾಯಿತ ಸದಸ್ಯರು, ಸಾರವಾಡ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೀತಾ ಕಲ್ಲವಗೋಳ, ಕಂಬಾಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರೇಖಾ ಪಾಟೀಲ, ಹಲಗಣಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮುಕ್ಕಣ್ಣ ನಾಯಕ, ನರೇಗಾ ತಾಂತ್ರಿಕ ಸಂಯೋಜಕ ಮಹೇಶ ಇಂಗಳೇಶ್ವರ, ಐಇಸಿ ಸಂಯೋಜಕರಾದ ಶಾಂತಪ್ಪ ಇಂಡಿ, ತಾಂತ್ರಿಕ ಸಹಾಯಕರಾದ ಶ್ರೀಧರ ರೆಡ್ಡಿ, ಮೋನಿಕಾ ಪೋಳ ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.