ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದ ಉದ್ಘಾಟನೆಯನ್ನು ಫೆ.೧೬ ರಂದು ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಚ್.ಪಿ.ಸಂದೇಶ್ ಅವರ ಉಪಸ್ಥಿತಿಯಲ್ಲಿ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಐ.ಅರುಣ್ ಅವರು ಉದ್ಘಾಟಿಸಲಿದ್ದು, ಕಾನೂನು ಸಚಿವರಾದ ಎಚ್.ಕೆ.ಪಾಟೀಲರು ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚೀವರಾದ ಎಂ.ಬಿ.ಪಾಟೀಲರು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲರು ಮತ್ತು ಸಾಬೂಬು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವದಾಗಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಶಿವಾಜಿ ನಲವಡೆ, ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ಲೊಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರ ಸಿ.ಎಸ್.ಪೊಲೀಸಪಾಟೀಲರು ತಿಳಿಸಿದ್ದಾರೆ.
