Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯದಲ್ಲಿ ರೂ.10 ಲಕ್ಷ ಕೋಟಿ ಹೂಡಿಕೆ, 6 ಲಕ್ಷ ಉದ್ಯೋಗ ಸೃಷ್ಟಿ!
(ರಾಜ್ಯ ) ಜಿಲ್ಲೆ

ರಾಜ್ಯದಲ್ಲಿ ರೂ.10 ಲಕ್ಷ ಕೋಟಿ ಹೂಡಿಕೆ, 6 ಲಕ್ಷ ಉದ್ಯೋಗ ಸೃಷ್ಟಿ!

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಾಗತಿಕ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ಅಧಿಕ ಪ್ರಯೋಜನ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಮಾಹಿತಿ

ಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ.
ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಂಬಿ ಪಾಟೀಲ್, ವಲಯವಾರು ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದರು. ಇನ್ನೂ ಕೆಲವು ಪ್ರತಿಷ್ಠಿತ ಕಂಪನಿಗಳು ಭಾರೀ ಹೂಡಿಕೆಗೆ ಆಸಕ್ತಿ ತೋರಿದ್ದು, ಒಡಂಬಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇವು ಆಖೈರಾದರೆ ಸಮಾವೇಶದ ಮೂಲಕ ಬರಲಿರುವ ಬಂಡವಾಳದ ಮೊತ್ತ ಇನ್ನೂ ಗಮನಾರ್ಹವಾಗಿ ಏರಲಿದೆ. ಈಗ ಖಾತ್ರಿಯಾಗಿರುವ ಹೂಡಿಕೆಯಲ್ಲಿ ಶೇಕಡ 75ರಷ್ಟು ಬೆಂಗಳೂರಿನ ಆಚೆ ಇರುವ ಪ್ರದೇಶಗಳಿಗೆ ಹೋಗಲಿದ್ದು, ಶೇಕಡ 45ರಷ್ಟು ಬಂಡವಾಳವು ಉತ್ತರ ಕರ್ನಾಟಕದ ಪ್ರದೇಶಗಳಿಗೆ ಹರಿಯಲಿದೆ ಎಂದರು. ಸೃಷ್ಟಿಯಾಗಲಿರುವ 6 ಲಕ್ಷ ಉದ್ಯೋಗಗಳು ತಯಾರಿಕೆ ಮತ್ತು ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಸೇರಿವೆ. ಹೂಡಿಕೆಗಳಲ್ಲಿ ಜಿಂದಾಲ್ ಸಮೂಹವು ಇಂಧನ, ಸಿಮೆಂಟ್, ಉಕ್ಕು ಮತ್ತು ಪೂರಕ ಉದ್ಯಮಗಳಲ್ಲಿ 1.2 ಲಕ್ಷ ಕೋಟಿ ರೂ. ಹೂಡುತ್ತಿದೆ. ಬಲ್ದೋಟಾ ಸಮೂಹವು ಕೊಪ್ಪಳದಲ್ಲಿ 54 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಕೊಪ್ಪಳದಲ್ಲಿ ಉಕ್ಕು ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಲ್ಯಾಮ್ ರೀಸರ್ಚ್ ಕಂಪನಿಯು ತಯಾರಿಕೆ ಮತ್ತು ಸಂಶೋಧನೆಗೆ 10 ಸಾವಿರ ಕೋಟಿ ರೂ.ಗಳಷ್ಟು ಬೃಹತ್ ಬಂಡವಾಳ ತೊಡಗಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಇನ್ನುಳಿದಂತೆ ಸ್ನೀಡರ್ ಎಲೆಕ್ಟ್ರಿಕ್ ಸಂಸ್ಥೆಯು ವಿದ್ಯುತ್ ಸಾಧನಗಳ ತಯಾರಿಕೆ ಮತ್ತು ಸಂಶೋಧನೆಗೆ 2,247 ಕೋಟಿ ರೂ., ವೋಲ್ವೊ ಕಂಪನಿಯು ವಿದ್ಯುಚ್ಚಾಲಿತ ಬಸ್/ಟ್ರಕ್ ತಯಾರಿಕೆಗೆ 1,400 ಕೋಟಿ ರೂ., ಹೋಂಡಾ ಕಂಪನಿಯು ಇ.ವಿ. ವಾಹನಗಳ ತಯಾರಿಕೆಗೆ 600 ಕೋಟಿ ರೂ., ಮತ್ತು ಸ್ಯಾಫ್ರಾನ್ ಕಂಪನಿಯು ಏವಿಯಾನಿಕ್ಸ್ ಉತ್ಪಾದನೆಗೆ 225 ಕೋಟಿ ರೂ. ಹೂಡುತ್ತಿವೆ. 2025-30ರವರೆಗಿನ ನೂತನ ಕೈಗಾರಿಕಾ ನೀತಿಯಡಿ ಒಟ್ಟಾರೆಯಾಗಿ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದರು. ಹೊಸ ನೀತಿಯಡಿಯಲ್ಲಿ ತುಮಕೂರು ಮತ್ತು ವಿಜಯಪುರದಲ್ಲಿ ಕೈಗಾರಿಕಾ ಪಾರ್ಕ್, ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್ ಪಾರ್ಕ್, ಉಳಿದ ಭಾಗಗಳಲ್ಲಿ ಡೀಪ್-ಟೆಕ್ ಪಾರ್ಕ್ ಮತ್ತು ಸ್ವಿಫ್ಟ್ ಸಿಟಿ ಮುಂತಾದವು ಅಸ್ತಿತ್ವಕ್ಕೆ ಬರಲಿವೆ. ಡೀಪ್ ಟೆಕ್ ಮತ್ತು ಸ್ವಿಫ್ಟ್ ಸಿಟಿ ಯೋಜನೆಗಳು ತಲಾ 1 ಲಕ್ಷ ಕೋಟಿ ರೂ. ಹೂಡಿಕೆ ಸೆಳೆಯುವ ಮತ್ತು ತಲಾ 1 ಲಕ್ಷ ಉದ್ಯೋಗ ಸೃಷ್ಟಿಸುವಂತಹ ಶಕ್ತಿ ಹೊಂದಿವೆ. ಕ್ವಿನ್ ಸಿಟಿ ಅಭಿವೃದ್ಧಿಗೆ ಸಂಬಂಧಿಸಿದಂತೆ 10 ವಿ.ವಿ.ಗಳೊಂದಿಗೆ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಎಂದು ಪಾಟೀಲ ನುಡಿದರು.

ಬಿಯಾಂಡ್ ಬೆಂಗಳೂರು ಉಪಕ್ರಮಕ್ಕೆ ಉತ್ತೇಜನ :ಡಿಕೆಶಿ

ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, 1.10 ಲಕ್ಷ ನೋಂದಾಯಿತ ವಾಹನಗಳಿದ್ದು, ಇದು ನಗರದ ಜನಜೀವನದ ಮೇಲೆ ವಿಪರೀತ ಒತ್ತಡ ಸೃಷ್ಟಿಸಿದೆ. ಆದ್ದರಿಂದ ಕೈಗಾರಿಕೆಗಳು ಬೆಂಗಳೂರಿನಿಂದ ಹೊರಗಿರುವ ಪ್ರದೇಶಗಳಿಗೆ ಹೋಗುವುದನ್ನು ಉತ್ತೇಜಿಸಲಾಗುತ್ತಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹವನ್ನೇ ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೂ ಹೊಸ ನೀತಿ ತರಲಾಗಿದೆ. ವಿಶೇಷವಾಗಿ ರಾಜ್ಯದ 300 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಗಮನ ಹರಿಸಲಿದ್ದೇವೆ. ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನೆರವಿಗೆ ಪೋರ್ಟಲ್ ಆರಂಭಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಭೂಮಿಯ ಬೆಲೆ ಜಾಸ್ತಿ ಇದೆ. ಹೀಗಾಗಿ ಉದ್ಯಮಿಗಳಿಗೆ ನೆರವು ನೀಡುವ ಬೇರೆಬೇರೆ ಕ್ರಮಗಳತ್ತ ಚಿಂತಿಸಲಾಗುತ್ತಿದೆ. ನಾವು ಹೂಡಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದೇವೆಯೇ ವಿನಾ ನೆರೆಹೊರೆಯ ರಾಜ್ಯಗಳ ಜತೆಯಲ್ಲ. ಭೂಮಿಯ ಬೆಲೆ ಹೆಚ್ಚಾಗಲು ಇದೂ ಒಂದು ಕಾರಣವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಕ್ವಿನ್ ಸಿಟಿ: 10 ಒಪ್ಪಂದಕ್ಕೆ ಸಹಿ

ಮಹತ್ವಾಕಾಂಕ್ಷೆಯ ಕ್ವಿನ್ ಸಿಟಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 10 ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ಇದರಲ್ಲಿ ಅಮೆರಿಕಾದ ನ್ಯೂಯಾರ್ಕ್ ನ ಸೇಂಟ್ ಜಾನ್ಸ್ ಯೂನಿವರ್ಸಿಟಿ ಹಾಗೂ ಯೂನಿವರ್ಸಿಟಿ ಆಫ್ ಲಿವರ್ ಪೂಲ್ ಜತೆಗೂ ಒಪ್ಪಂದಕ್ಕೆ ಸಹಿ ಮಾಡಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ವಿವರಿಸಿದರು.

ವಿಜಯಪುರ ಜಿಲ್ಲೆಗೆ 42 ಸಾವಿರ ಕೋಟಿ

ವಿಜಯಪುರ ಜಿಲ್ಲೆಯಲ್ಲಿ 42 ಸಾವಿರ ಕೋಟಿ ಹೂಡಿಕೆಗೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇನ್ನೂ ಕೆಲವು ಒಪ್ಪಂದ ಆಗುವುದರಲ್ಲಿ ಇದ್ದು, ಉತ್ತರ ಕರ್ನಾಟಕಕ್ಕೆ ಒಳ್ಳೆಯ ಅವಕಾಶಗಳು ಮುಂದಿನ ದಿನಗಳಲ್ಲಿ ಸಿಗಲಿವೆ.”

– ಎಂ.ಬಿ.ಪಾಟೀಲ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.