ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ. ಜಿ ಅವರು ಫೆಬ್ರವರಿ ೧೮ರ ಬೆಳಿಗ್ಗೆ ೯:೩೦ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಂದುಕೊರತೆ ಅಹವಾಲು ಸ್ವೀಕರಿಸಲಿದ್ದಾರೆ.
ಸಮುದಾಯದ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
