ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸುತ್ತಲೂ ಕಂಪೌಂಡ ನಿರ್ಮಿಸಲು ಕಾಲೇಜಿಗೆ ಶೀಘ್ರದಲ್ಲಯೇ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿಸುವೆ ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಸರಕಾರಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಗೃಹ ಮಂಡಳಿಯ ೨೦೨೧-೨೨ನೆಯ ಸಾಲಿನ ಎಸ್.ಡಿ.ಪಿ ಯೋಜನೆಯಡಿಯಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಸಿಂದಗಿ ನಗರ ಗಣನೀಯವಾಗಿ ಹೆಸರು ಮಾಡಿದೆ. ಜಿಲ್ಲೆಯಲ್ಲಿಯೇ ಸಿಂದಗಿ ಶಿಕ್ಷಣ ಕಾಶಿಯಾಗಿ ಬೆಳೆಯುತ್ತಿದೆ. ಶಿಕ್ಷಣಕ್ಕೆ ಹೆಚ್ಚಿನ ಪ್ರಾಧ್ಯಾನತೆಯನ್ನು ಮಕ್ಕಳ ಶ್ರೇಯೊಭಿವೃದ್ಧಿಗೆ ಸದಾ ಶ್ರಮಿಸುವೆ ಎಂದರು.
ಈ ವೇಳೆ ಕಾಲೇಜು ಅಭಿವೃದ್ಧಿ ಸದಸ್ಯರಾದ ಸಿದ್ದನಗೌಡ ಪಾಟೀಲ, ಪ್ರಭುಲಿಂಗ ಲೋಣಿ, ಪ್ರತಿಭಾ ಚೆಳ್ಳಗಿ, ಪ್ರಕಾಶ ನಿಗಡಿ, ಬಸವರಾಜ ಅಂಬಲಗಿ, ಶಿವಾನಂದ ಗಣಿಹಾರ, ಜಿಲ್ಲಾ ಕೆಡಿಪಿ ಸದಸ್ಯ ನೂರ್‌ಅಹ್ಮದ ಅತ್ತಾರ, ಕೆ.ಎಚ್.ಬಿ ಅಭಿಯಂತರ ಸಾಧಿಕ್, ಗುತ್ತಿಗೆದಾರ ವೆಂಕಟೇಶ, ಪ್ರಾಚಾರ್ಯ ಎಸ್.ಎಎಸ್.ಹಳೆಮನಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರು ಇದ್ದರು.

