ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಇದೇ ಫೆಬ್ರವರಿ ೧೯ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯:೩೦ಕ್ಕೆ ನಗರದ ಶಿವಾಜಿ ವೃತ್ತದಿಂದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಮೆರವಣಿಗೆ ಹಾಗೂ ಬೆಳಿಗ್ಗೆ ೧೦:೩೦ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜರುಗುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಹಾಗೂ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್.ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ರವಿಕುಮಾರ ಎನ್,ಕೇಶವ ಪ್ರಸಾದ ಎಸ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಡಾ.ಆನಂದ ಕುಲಕರ್ಣಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
