ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾಶಿವರಾತ್ರಿ ಪ್ರಯುಕ್ತ ಬಸಂತವನ ಶಿವಗಿರಿಯಲ್ಲಿ ಫೆ.೨೬ರಂದು ಉತ್ಸವ ಜರುಗಲಿದ್ದು, ಶಿವಗಿರಿಗೆ ತೆರಳುವ ಪ್ರಯಾಣಿಕರ ಅನಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಗಾಂಧಿಚೌಕ ನಗರ ಸಾರಿಗೆ ಬಸ್ ನಿಲ್ದಾಣ, ಸೆಟಲೈಟ್ ಬಸ್ ನಿಲ್ದಾಣ ಹಾಗೂ ಕೇಂದ್ರ ಬಸ್ ನಿಲ್ದಾಣಗಳಲ್ಲಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
