ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಖಾಲಿ ಇರುವ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ಥಳೀಯ ಅಭ್ಯರ್ಥಿಗಳು ವಿದ್ಯಾರ್ಹತೆ ಹಾಗೂ ಅನುಭವಕ್ಕೆ ಸಂಬಂಧಿಸಿದಂತೆ ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: ೨೮-೦೨-೨೦೨೫ರ ಸಂಜೆ ೫ರ ಒಳಗಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
