ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಮಾ.10 ರಂದು ಬೆಳಿಗ್ಗೆ 10 ಗಂಟೆಗೆ ವಿಜಯಪುರ ನಗರದಲ್ಲಿರುವ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.
ನಗರದ ಹೊಸ ಪತ್ರಿಕಾ ಭವನದಲ್ಲಿ ಸೋಮವಾರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷ ಪ್ರಕಾಶ ಬೆಣ್ಣೂರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ, ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಕೊಳ್ಳಲಾಯಿತು.
ಅದೇ ದಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ ಸುಶಿಲೇಂದ್ರ ನಾಯಕ, ಮಹೇಶ ಶಟಗಾರ, ಕೆಯುಡಬ್ಲುಜೆ ಪ್ರಶಸ್ತಿಗೆ ಭಾಜನರಾದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಶಶಿಕಾಂತ ಮೆಂಡೇಗಾರ, ರಾಣಿ ಚನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯರಾಗಿರುವ ರಫೀ ಭಂಡಾರಿ, ಕರ್ನಾಟಕ ಸರ್ಕಾರದ ಸುವರ್ಣ ಕರ್ನಾಟಕ ಪ್ರಶಸ್ತಿಗೆ ಭಾಜನರಾಗಿರುವ ರುದ್ರಪ್ಪ ಆಸಂಗಿ, ಸ್ಥಳೀಯ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಇರ್ಫಾನ್ ಶೇಖ್ ಇನ್ನಿತರರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಲ್ಲದೆ ಸಭೆಯಲ್ಲಿ ಮೂರು ವರ್ಷ ಅವಧಿಯ ವರದಿ, ಸಮ್ಮೇಳನ ಸೇರಿ ಸಂಘದ ಲೆಕ್ಕಪತ್ರ ಮಂಡನೆ ಸೇರಿ ಹಲವು ಮಹತ್ವದ ವಿಷಯಗಳನ್ನು ಚರ್ಚಿಸಲು ತೀರ್ಮಾನಿಸಲಾಯಿತು.
ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಡಿ.ಬಿ.ವಡವಡಗಿ, ಕೆ.ಕೆ.ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಷ್ಟ್ರೀಯ ಸಮಿತಿ ಸದಸ್ಯರಾದ ಮಹೇಶ ಶಟಗಾರ, ಖಜಾಂಚಿ ರಾಹುಲ್ ಆಪ್ಟೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಬಸವರಾಜ ಉಳ್ಳಾಗಡ್ಡಿ, ಅಶೋಕ ಯಡಹಳ್ಳಿ, ಇರ್ಪಾನ್ ಶೇಖ್, ಗುರು ಗದ್ದನಕೇರಿ, ಸುನೀಲ ಗೋಡೆನ್ನವರ್, ಶಶಿಕಾಂತ ಮೆಂಡೇಗಾರ, ಗುರುರಾಜ ಲೋಕೂರೆ, ಸಲಹಾ ಸಮಿತಿಯ ಸೀತಾರಾಮ ಕುಲಕರ್ಣಿ ಇನ್ನಿತರರು ಇದ್ದರು.

