Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಲೆಮಾರಿ ಸಮುದಾಯ ಮುಖ್ಯವಾಹಿನಿಗೆ ತರಲು ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಅಲೆಮಾರಿ ಸಮುದಾಯ ಮುಖ್ಯವಾಹಿನಿಗೆ ತರಲು ಕ್ರಮ ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸ್ವ ಉದ್ಯೋಗ, ವೃತ್ತಿ ಕೌಶಲ್ಯತೆ, ಶಿಕ್ಷಣಕ್ಕೆ ಆದ್ಯತೆ ನೀಡಿ, ಸರ್ಕಾರ ಜಾರಿಗೊಳಿಸಿರುವ ವಿವಿಧ ಆರ್ಥಿಕ ಬೆಂಬಲ ನೀಡುವ ಯೋಜನೆಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗಕ್ಕೆ ದೊರಕಿಸಲು ಅಧಿಕಾರಿಗಳು ಇಚ್ಛಾಶಕ್ತಿ ಹಾಗೂ ಅಂತಕರಣದಿಂದ ಕಾರ್ಯನಿರ್ವಹಿಸಿ ಇಂತಹ ಸಮುದಾಯದವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈ ಸಮುದಾಯ ಆರ್ಥಿಕವಾಗಿ ಸದೃಢಗೊಳ್ಳುವುದರೊಂದಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಅಧಿಕಾರಿಗಳು ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳಿಗೆ ಸರ್ಕಾರ ನೀಡುವ ಆರ್ಥಿಕ ಬೆಂಬಲದ ಯೋಜನೆಗಳ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸೂಕ್ತ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಲವು ಯೋಜನೆಗಳನ್ನು ನೀಡಿದೆ. ಈ ಸಮುದಾಯದ ಜನರಿಗೆ ಸರ್ಕಾರದ ಯೋಜನೆಗಳ ಜಾಗೃತಿ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಯೋಜನೆಗಳ ಸಂಪೂರ್ಣ ಅರಿವನ್ನು ಜನರಲ್ಲಿ ಮೂಡಿಸಿ, ಅರ್ಹರಿಗೆ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯೋಜನೆಗಳ ಕುರಿತು ಸೂಕ್ತ ಅರಿವು ಮೂಡಿಸಬೇಕು. ನಿವೇಶನ ರಹಿತ ಅಲೆಮಾರಿ ಕುಟುಂಬಗಳ ಸರ್ಕಾರಿ ಭೂಮಿಯನ್ನು ಗುರುತಿಸುವ ಕಾರ್ಯ ಕೈಗೊಳ್ಳಬೇಕು. ವಸತಿ ರಹಿತ-ವಸಹಿತರ ಸಮೀಕ್ಷೆ ಕೈಗೊಂಡು ವರದಿ ನೀಡುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಯಡಿ ನಿಗದಿಪಡಿಸಲಾದ ಭೌತಿಕ ಗುರಿಗಳಗನುಗುಣವಾಗಿ ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಆದ್ಯತೆಯ ಮೇಲೆ ಇತ್ಯರ್ಥಪಡಿಸಬೇಕು. ಉದ್ಯಮಶೀಲತಾ ಯೋಜನೆಯಡಿ ಫಲಾನುಭವಿಗಳ ಯೋಜನೆಯನ್ನು ಸಾಕಾರಗೊಳಿಸಬೇಕು. ಈ ಬಗ್ಗೆ ಬ್ಯಾಂಕ್‌ಗಳು ಸಹ ಅಗತ್ಯ ದಾಖಲೆಗಳನ್ನು ಪಡೆದು, ಸ್ವಾವಲಂಬಿ ಜೀವನ ನಡೆಸಲು ಸ್ವ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡು ಈ ಸಮುದಾಯಗಳ ವಿವಿಧ ಕಾಲನಿಗಳಿಗೆ ಭೇಟಿ ನೀಡಿ, ಕುಂದು-ಕೊರತೆಗಳನ್ನು ಆಲಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಆನಂದಕುಮಾರ, ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

“ಈಗಾಗಲೇ ೨೦೧ ಗ್ರಂಥಾಲಯಗಳಿದ್ದು, ೨೮೦ ಮಂಜೂರಾಗಿದ್ದು, ಈ ಸಮುದಾಯದ ಬೇಡಿಕೆಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು.”

– ರಿಷಿ ಆನಂದ
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿಜಯಪುರ

“ವಿವಿಧ ವಸತಿ ಶಾಲೆಗಳಲ್ಲಿ ಈ ಸಮುದಾಯ ಮಕ್ಕಳಿಗೆ ಆದ್ಯತೆಯ ಮೇರೆಗೆ ಯಾವುದೇ ಪ್ರವೇಶ ಪರೀಕ್ಷೆ ನಡೆಸದೇ ಪ್ರವೇಶಾವಕಾಶ ದೊರಕಿಸಲು ಸರ್ಕಾರ ಅವಕಾಶ ನೀಡಿದ್ದು, ಇದರ ಸದ್ಬಳಕೆಯಾಗಿ ಈ ಸಮುದಾಯದ ಮಕ್ಕಳು ಉನ್ನತ, ಗುಣಮಟ್ಟದ ಶಿಕ್ಷಣ ಪಡೆದುಕೊಂಡು, ಸ್ವಾವಲಂಬಿ ಜೀವನ ನಡೆಸಲು ಈ ಯೋಜನೆಗಳ ಮೂಲಕ ಅನುವು ಮಾಡಿಕೊಡಬೇಕು. ನಿಗಮದಿಂದ ದೊರೆಯುವ ಸರ್ಕಾರದ ಹಲವು ಸೌಲಭ್ಯ-ಸವಲತ್ತುಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ, ಅರ್ಹರು ಈ ಯೋಜನೆಗಳ ಲಾಭ ಪಡೆದುಕೊಳ್ಳುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು.”

– ಶ್ರೀಮತಿ ಪಲ್ಲವಿ ಜಿ.
ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.