ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿ ಫಸಲ್ ಭೀಮಾ ಯೋಜನೆಯಡಿ ರೈತರು ಸಲ್ಲಿಸಿದ್ದ ಅರ್ಜಿಗಳಲ್ಲಿ ಕೆಲವು ತಿರಸ್ಕೃತಗೊಂಡಿದ್ದು, ಈ ಕುರಿತು ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಾಗಲೇ ಪ್ರಕಟಣೆ ನೀಡಲಾಗಿದೆ. ತಿರಸ್ಕೃತಗೊಂಡ ಅರ್ಜಿ ಬಗ್ಗೆ ರೈತರಲ್ಲಿ ಆಕ್ಷೇಪಣೆ ಇದ್ದಲ್ಲಿ ಮರು ದಾಖಲೀಕರಣಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಸಹಾಯಕ ನಿರ್ದೇಶಕರಾದ ಎಸ್.ಎ. ಇನಾಮದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
