ಉದಯರಶ್ಮಿ ದಿನಪತ್ರಿಕೆ
ಚಡಚಣ: ಇದೇ ಪ್ರಪ್ರಥಮ ಬಾರಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಹಾಗೂ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ಚಡಚಣ ಇವರ ಸಹಕಾರದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿರುವ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ವೇದಿಕೆಯಲ್ಲಿ ಜನಕಥಾಕೀರ್ತನ ಶಿಬಿರ ಮತ್ತು ಉತ್ಸವ -2025 ಇದೇ ಪೆಬ್ರುವರಿ 19 ರಿಂದ 23 ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾಡಿನಾದ್ಯಂತ ಹಲವಾರು ಸಾಹಿತಿಗಳು, ಕಲಾವಿದರು, ವಿವಿಧ ಅಕಾಡೆಮಿಯ ಅಧ್ಯಕ್ಷರು, ಸದಸ್ಯರು ಆಗಮಿಸಲಿದ್ದಾರೆ, ಆದ ಕಾರಣ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಕಾರ್ಯಕ್ರಮವನ್ನು ಯಸ್ಸಿಶ್ವಿಗೊಳಿಸಬೇಕೆಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಸದಸ್ಯ ಸಂಚಾಲಕರಾದ ದೇವರಾಜು.ಡಿ (ಪದ ದೇವರಾಜ) ಅವರು ತಿಳಿಸಿದ್ದಾರೆ.

