ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲ್ಲೂಕ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ತಾಲೂಕು ಘಟಕದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಯಿತು. ಅಧ್ಯಕ್ಷರಾಗಿ ಶಿವಾನಂದ ಭಾಸಗಿ, ಹಿರಿಯ ಉಪಾಧ್ಯಕ್ಷರಾಗಿ ಬಸವರಾಜ ಮೇತ್ರಿ, ವಕ್ತಾರರಾಗಿ ಅಬ್ಬಾಸಲಿ ಮನಿಯರ, ಮಹಿಳಾ ಸಂಘ ಕಾರ್ಯದರ್ಶಿಗಳಾಗಿ ಮೋಹಸಿನಾ ಮಕಾನದಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಶಶಿಧರ ಕಾಂಬಳೆ ತಿಳಿಸಿದ್ದಾರೆ. ನೂತನ ಪದಾಧಿಕಾರಿಗಳಿಗೆ ತಾಲ್ಲೂಕ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

