Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುಡುಗಾಡು ಸಿದ್ಧ ಕಾಲೋನಿಗೆ ಅಲೆಮಾರಿ ಅಬಿವೃದ್ಧಿ ನಿಗಮದ ಅಧ್ಯಕ್ಷೆ ಭೇಟಿ
(ರಾಜ್ಯ ) ಜಿಲ್ಲೆ

ಸುಡುಗಾಡು ಸಿದ್ಧ ಕಾಲೋನಿಗೆ ಅಲೆಮಾರಿ ಅಬಿವೃದ್ಧಿ ನಿಗಮದ ಅಧ್ಯಕ್ಷೆ ಭೇಟಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಇಲ್ಲಿಯ ಸಮೀಪದ ಮರಿಮಟ್ಟಿ ಗ್ರಾಮದಲ್ಲಿ ವಾಸವಾಗಿರುವ ಸುಡುಗಾಡುಸಿದ್ಧ ಜನಾಂಗದವರ ಕಾಲೋನಿಗೆ ಭಾನುವಾರ ರಾತ್ರಿ ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ. ಜಿ, ಭೇಟಿ ನೀಡಿ ಅವರ ಕುಂದುಕೊರತೆ ಆಲಿಸಿದರು.
ಸುಡುಗಾಡುಸಿದ್ಧ ಜನಾಂಗ ಅಲೆಮಾರಿಯಾಗಿದ್ದರೂ, ಈಗ ನಾವೆಲ್ಲಾ ಒಂದೆಡೆ ನೆಲೆನಿಂತಿದ್ದರೂ, ಸಾಕಷ್ಟು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದ್ದೇವೆ ಎಂದು ಮುಖಂಡ ಭೀಮಾಶಂಕರ ಉದಂಡಿ ಹೇಳಿದರು.
ಮರಿಮಟ್ಟಿಯಲ್ಲಿ ನೆಲೆನಿಂತು, ಅದು ಮುಳುಗಡೆಯಾದಾಗ ಇಲ್ಲಿ ಸ್ಥಳಾಂತರಗೊಂಡಿದ್ದೇವೆ, ಆದರೆ ಈಗ ನಮ್ಮ ಕುಟುಂಬಗಳು ವಿಸ್ತಾರಗೊಂಡಿವೆ, ಹೊಸ ಮನೆ ಕಟ್ಟಿಕೊಳ್ಳಲು ಗ್ರಾಮದಲ್ಲಿ ನಿವೇಶನಗಳಿಲ್ಲ, ಹೀಗಾಗಿ ಚಿಮ್ಮಲಗಿ ಭಾಗ ೧ ಬಿ ಪುನರ್ವಸತಿ ಕೇಂದ್ರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಇಲಾಖೆಯ ಅಧೀನದಲ್ಲಿ ಸಾಕಷ್ಟು ನಿವೇಶನಗಳು ಖಾಲಿಯಿವೆ, ಅವುಗಳಲ್ಲಿ ೬೦ ನಿವೇಶನಗಳನ್ನು ನಮ್ಮ ಅಲೆಮಾರಿ ಜನಾಂಗಕ್ಕೆ ಹಂಚಬೇಕು, ಸರ್ಕಾರದ ವಸತಿ ಯೋಜನೆಯಡಿ ಮನೆ ಕಟ್ಟಿಕೊಳ್ಳಲು ಹಣಕಾಸಿನ ನೆರವು ನೀಡಬೇಕೆಂದರು.
ಹಿರಿಯರಾದ ಎಸ್.ಆರ್. ವಿಭೂತಿ ಮಾತನಾಡಿ, ಗ್ರಾಮದ ತುಂಬಾ ವಿದ್ಯುತ್ ಸೌಕರ್ಯದ ಅಭಾವವಿದೆ, ಹಳೆ ವಿದ್ಯುತ್ ಕಂಬಗಳಿದ್ದು ಬೀಳುವ ಹಂತ ತಲುಪಿವೆ, ಅವುಗಳನ್ನು ಬದಲಿಸಬೇಕು, ಕೆಪಿಟಿಸಿಎಲ್ , ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಅರ್ಪಿಸಿದರೂ ಅವರು ಸ್ಪಂದಿಸುತ್ತಿಲ್ಲ ಎಂದು ದೂರಿದರು. ಆಲಮಟ್ಟಿಯ ವಿವಿಧ ಉದ್ಯಾನಗಳಲ್ಲಿ ಅರಣ್ಯ ಇಲಾಖೆ ೩೦೦ ಕ್ಕೂ ಅಧಿಕ ಅರಣ್ಯ ದಿನಗೂಲಿಗಳನ್ನು ನೇಮಕ ಮಾಡಿಕೊಂಡಿದೆ, ಅಲ್ಲಿ ಸುಡುಗಾಡು ಸಿದ್ಧ ಸಮಯದಾಯದ ಯುವಕರಿಗೂ, ಮಹಿಳೆಯರಿಗೂ ದಿನಗೂಲಿ ಕಾರ್ಮಿಕರಾಗಿ ನೌಕರಿ ದೊರೆತರೇ ಸಮುದಾಯ ಆರ್ಥಿಕವಾಗಿ ಸದೃಢವಾಗಲಿದೆ, ಭಿಕ್ಷಾಟನೆಯಿಂದ ಮುಕ್ತವಾಗಲಿದೆ ಎಂದರು.
ಮರಿಮಟ್ಟಿಯಲ್ಲಿ ನ್ಯಾಯಬೆಲೆ ಅಂಗಡಿ ಮಂಜೂರಿ ಮಾಡಲು ಮನವಿ ಮಾಡಿದರು.
ಸಮಸ್ಯೆ ಆಲಿಸಿದ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ನಿಮ್ಮ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು, ಸರ್ಕಾರ ಅಲೆಮಾರಿ ಜನಾಂಗ ಮೇಲೆತ್ತಲು ಬಹಳಷ್ಟು ಕ್ರಮ ಕೈಗೊಂಡಿದೆ, ನಿಗಮದಿಂದ, ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾತನಾಡಿದರು.
ತಹಶೀಲ್ದಾರ್ ಎ.ಡಿ. ಅಮರಾವದಗಿ, ಸಮಾಜ ಕಲ್ಯಾಣ ಜಿಲ್ಲಾ ಉಪನಿರ್ದೇಶಕ ಪುಂಡಲಿಕ ಮಾನಕರ, ಬಿಇಓ ವಸಂತ ರಾಠೋಡ, ತಾ.ಪಂ ಇಓ ವೆಂಕಟೇಶ ವಂದಾಲ, ಸುರೇಶ ಹುರಕಡ್ಲಿ, ಭಾಷಾಸಾಬ್ ಮನಗೂಳಿ, ಲಕ್ಷ್ಮಣ ವಿಭೂತಿ , ಆನಂದ ಕುಮಾರ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.