Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವಾಜಿ ಮಹಾರಾಜರ ದೇಶ ಪ್ರೇಮ-ಧೈರ್ಯ ಪ್ರೇರಣಾದಾಯಕ
(ರಾಜ್ಯ ) ಜಿಲ್ಲೆ

ಶಿವಾಜಿ ಮಹಾರಾಜರ ದೇಶ ಪ್ರೇಮ-ಧೈರ್ಯ ಪ್ರೇರಣಾದಾಯಕ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಾಲ್ಯದಲ್ಲಿಯೇ ಸೈನ್ಯ ಕಟ್ಟಿದ ಕೀರ್ತಿ ಶಿವಾಜಿ ಮಹಾರಾಜರವರದ್ದು, ಅವರ ಧೈರ್ಯ, ಸ್ಥೈರ್ಯ, ಸಾಹಸ ಹಾಗೂ ಮಹಾತ್ವಾಕಾಂಕ್ಷಿ ಗುಣಗಳನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕುಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಬುಧವಾರ ಹಮ್ಮಿಕೊಂಡ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು, ಶಿವಾಜಿ ಮಹಾರಾಜರು, ತಾಯಿಯ ಮಾರ್ಗದರ್ಶನದಿಂದ ಅಪ್ರತಿಮ ವ್ಯಕ್ತಿತ್ವವನ್ನು ರೂಪಿಸಿಕೊಂಡರು ಎಂದು ಹೇಳಿದರು.
ಶಿವಾಜಿ ಮಹಾರಾಜರು ಉತ್ತಮ ಆಡಳಿತಗಾರರಾಗಿದ್ದರು. ಗೆರಿಲ್ಲಾ ಯುದ್ದ ಕೌಶಲ್ಯ ಸೈನ್ಯದಲ್ಲಿ ಅಳವಡಿಸಿಕೊಂಡಿದ್ದ ಅವರ ಧೈರ್ಯ-ಸಾಹಸ, ಉತ್ತಮ ಆಡಳಿತ ಇಂದಿನ ಪಿಳಿಗೆಗೆ ಪ್ರೇರಣಾದಾಯಕವಾಗಿದೆ ಎಂದು ಅವರು ಹೇಳಿದರು.
ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಉಪನ್ಯಾಸ ನೀಡಿದ ಡಾ. ಆನಂದ ಕುಲಕರ್ಣಿ ಅವರು ಶಿವಾಜಿ ಮಹಾರಾಜರ ಮಹಾನ ವ್ಯಕ್ತಿತ್ವ ದಾರ್ಶನಿಕ ವಿಚಾರಧಾರೆಗಳು, ಹುಟ್ಟು, ಬಾಲ್ಯ ಹಾಗೂ ಸಾಮ್ರಾಜ್ಯ ಕಟ್ಟಿದ ಕುರಿತು ಉಪನ್ಯಾಸದ ಮೂಲಕ ಬೆಳಕು ಚೆಲ್ಲಿದರು.
ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಮಾತನಾಡಿದರು. ನಿವೃತ್ತ ಶಿಕ್ಷಕ ಮಮದಾಪುರ ನಿರ್ವಹಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ರಾಹುಲ ಜಾಧವ, ವಿಠ್ಠಲ ಹೊಸಪೇಟೆ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿಜಯಕುಮಾರ್ ಚವ್ಹಾಣ, ನಿವೃತ್ತ ಪ್ರಾಂಶುಪಾಲ ಸದಾಶಿವ ಪವಾರ, ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮೆರವಣಿಗೆಗೆ ಚಾಲನೆ

ಜಯಂತಿ ಕಾರ್ಯಕ್ರಮಕ್ಕೂ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನಗರದ ಛತ್ರಪತಿ ಶಿವಾಜಿ ವೃತ್ತದಲ್ಲಿ ಚಾಲನೆ ನೀಡಿದರು.
ಮೆರವಣಿಗೆಯೂ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರಕ್ಕೆ ತಲುಪಿ ಸಮಾವೇಶಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಸುರೇಶ ಬಿಜಾಪುರ, ಭೀಮರಾಯ ಜಿಗಜಿಣಗಿ, ದೇವೆಂದ್ರ ಮಿರೆಕರ, ಸೋಮನಗೌಡ ಕಲ್ಲೂರ, ವಿದ್ಯಾವತಿ ಅಂಕಲಗಿ, ಗಿರೀಶ್ ಕುಲಕರ್ಣಿ ಉಪಸ್ಥಿತರಿದ್ದರು.

ಸಚಿವ ಎಂ.ಬಿ.ಪಾಟೀಲರಿಂದ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ

ವಿಜಯಪುರ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ವಿಜಯಪುರ ನಗರದಲ್ಲಿರುವ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.