ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ವಿಪತ್ತು ನಿರ್ವಹಣಾ ಕೋಶ ಹಾಗೂ ಎನ್‌ಟಿಪಿಸಿ ಇವರ ವತಿಯಿಂದ ಎನ್‌ಟಿಪಿಸಿಯಲ್ಲಿ ಫೆ.೧೮ರಂದು ಅಗ್ನಿ ಅವಘಢಗಳಲ್ಲಿ ಜಾಗೃತಿ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತ ಅಣುಕು ಪ್ರದರ್ಶನ ಯಶಸ್ವಿಯಾಗಿ ನಡೆಸಲಾಯಿತು.
ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರ ಮಾರ್ಗದರ್ಶನದಲ್ಲಿ ಅಣುಕು ಪ್ರದರ್ಶನವನ್ನು ನಡೆಸಲಾಗಿದ್ದು, ಅಪಾಯದ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಈ ಅಣುಕು ಪ್ರದರ್ಶನದಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಉಪಸ್ಥಿತರಿದ್ದು, ಅಣುಕು ಪ್ರದರ್ಶನವನ್ನು ವೀಕ್ಷಿಸಿದರು. ಎನ್‌ಟಿಪಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.

