ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಠಾಣೆಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಒಟ್ಟು 09 ಜನ ಆರೋಪಿತರನ್ನು ಪತ್ತೆ ಮಾಡಿ, ಅವರಿಂದ 09 ಕಂಟ್ರಿ ಪಿಸ್ತೂಲುಗಳನ್ನು ಹಾಗೂ 24 ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳುವಲ್ಲಿ ತಿಕೋಟಾ ಠಾಣಾ ಪಿಎಸ್ಐ ಬಸವರಾಜ ಉಳ್ಳಾಗಡ್ಡಿ ಹಾಗೂ ತಂಡದವರು ಅತೀ ಪ್ರಮುಖ ಪಾತ್ರ ನಿರ್ವಹಿಸಿದ್ದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಗಳವಾರ ಪ್ರಶಂಸನಾ ಪತ್ರ ನೀಡಿದ್ದಾರೆ.
ನಿಮ್ಮ ಕರ್ತವ್ಯನಿಷ್ಠೆ ಹಾಗೂ ಪರಿಶ್ರಮ ಶ್ಲಾಘನೀಯವಾದದ್ದು. ನಿಮ್ಮ ಈ ಸಮರ್ಪಣಾಭಾವದ ಕೆಲಸ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇನ್ನು ಮುಂದೆಯು ಸಹ ನೀವು ನಿಮ್ಮ ಕರ್ತವ್ಯದಲ್ಲಿ ಇದೇ ರೀತಿ ಪ್ರಾಮಾಣಿಕ ಪ್ರಯತ್ನ ಮಾಡಿ ಇಲಾಖೆಗೆ ಗೌರವ ಹೆಚ್ಚಿಸುತ್ತೀರೆಂದು ಆಶಿಸುತ್ತಾ ಈ ಪ್ರಶಂಸನಾ ಪತ್ರ ವಿತರಿಸಿದರು.

