Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೆಟ್ಟಗೆ ಆಡಳಿತ ಮಾಡಿ-ಇಲ್ಲವೇ ರಾಜೀನಾಮೆ ಕೊಡಿ!
(ರಾಜ್ಯ ) ಜಿಲ್ಲೆ

ನೆಟ್ಟಗೆ ಆಡಳಿತ ಮಾಡಿ-ಇಲ್ಲವೇ ರಾಜೀನಾಮೆ ಕೊಡಿ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ | ರಾಜ್ಯದ ಜನತೆಗೆ ಮೋಸ | ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಈಗ ಯೋಜನೆಗಳನ್ನು ನಿಲ್ಲಿಸಿ ರಾಜ್ಯದ ಜನತೆಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬುಧವಾರ ವಾಗ್ದಾಳಿ ನಡೆಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದರೆ, ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಎಂದು ಹೇಳಿದ್ದರು. ಆದರೆ, ಬಸ್ ನಿಲ್ಲಿಸಿದ್ರು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ಹಣ ತಲುಪುತ್ತಿಲ್ಲ. ಸಿದ್ದರಾಮಯ್ಯ ಯೋಜನೆಗಳು ನಿಂತಿದೆಯಾ ಎಂದು ಕೇಳಿದ್ದಾರೆ. ಹಣಕಾಸು ಇಲಾಖೆ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ ಕರ್ನಾಟಕದಲ್ಲಿ ಪ್ರತಿನಿತ್ಯ ಒಂದಲ್ಲ ಒಂದರ ದರ ಏರಿಕೆಯಾಗುತ್ತಿದೆ ಎಂದು ಕಿಡಿಕಾರಿದರು.
10 ಕೆಜಿ ಕೊಡುತ್ತೀವೆ ಎಂದಿದ್ದರು. ಈಗ ಅಕ್ಕಿ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ. ಹೊಸ 9 ವಿವಿ ಬಂದ್ ಮಾಡಿದ್ದಾರೆ. ಹಳೆಯ ವಿವಿಗಳಿಗೆ ಹಣವನ್ನೇ ಕೊಡ್ತಿಲ್ಲ. ಹಾಗಾದರೆ ಹೊಸ ವಿವಿಯಿಂದ ಸರ್ಟಿಫಿಕೇಟ್ ಪಡೆದವರ ಕಥೆ ಏನು..? ಇದಕ್ಕೆ ಯಾವುದೇ ಸ್ಪಷ್ಟತೆಯನ್ನು ಸರ್ಕಾರ ಕೊಟ್ಟಿಲ್ಲ. ಕಂದಾಯ ಇಲಾಖೆಯಲ್ಲಿ ಸಿಬ್ಬಂದಿಗೆ ಸಂಬಳ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಟ್ಯಾಕ್ಸ್ ವ್ಯವಸ್ಥೆ ಜಾರಿಯಾಗಿದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಕಟ್ಟಬೇಕೆಂದರೆ ಅಡಿಗೆ 100 ರೂ. ಕೊಡಬೇಕಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ದನದ ಕೆಚ್ಚಲು ಕೊಯ್ದವರನ್ನು ಮಾನಸಿಕ ಅಸ್ವಸ್ಥ ಎನ್ನುತ್ತಾರೆ. ಪೊಲೀಸ್ ಠಾಣೆಗೆ ದಾಳಿ ಮಾಡಲಾಗಿದೆ, ಆಸ್ಪತ್ರೆಯಲ್ಲಿ ಬಾಣಂತಿಯ ಸಾವಾಗುತ್ತಿದೆ, ಎಲ್ಲವನ್ನ ಕೇಂದ್ರ ಸರ್ಕಾರ ಮಾಡೋದಾದ್ರೆ ಸಿದ್ದರಾಮಯ್ಯನವರೇ ನೀವು ಏಕೆ ಅಧಿಕಾರ ನಡೆಸುತ್ತೀರಿ ಎಂದು ಪ್ರಶ್ನಿಸಿದರು.

ಸಿಎಂ ಸುಳ್ಳು ಹೇಳಿದ್ದಾರೆ!

ಮೆಟ್ರೋ ದರ ಏರಿಕೆ ಕುರಿತು ಮಾತನಾಡಿದ ಕೇಂದ್ರ ಸಚಿವೆ ಕರಂದ್ಲಾಜೆ, ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಮೆಟ್ರೋ ಅಧಿಕಾರಿಗಳು ಟಿಕೆಟ್ ದರ ಹೆಚ್ಚಳಕ್ಕೆ ಪತ್ರ ಬರೆದಿದ್ದರು. ನಿಮ್ಮ ಒತ್ತಡಕ್ಕೆ ಒಳಗಾಗಿ ಕೇಂ‍ದ್ರ ಅನುಮತಿ ಕೊಟ್ಟಿದೆ ಎಂದು ಎಂದರು.

ಸಿದ್ದರಾಮಯ್ಯನವರದ್ದು ಬ್ರಿಟಿಷರ ಮೆಂಟಾಲಿಟಿ

ಜಾತಿ ಜನಗಣತಿ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ಒಡೆದು ಆಳುವ ನೀತಿ ಮಾಡುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣರ ಉಪಜಾತಿಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಮೇಜರ್ ಜಾತಿ ಒಡೆಯಬೇಕು ಎಂದು ಮಾಡುತ್ತಿದ್ದಾರೆ. ಬ್ರಿಟಿಷರ ಮೆಂಟಾಲಿಟಿ ಸಿದ್ದರಾಮಯ್ಯನವರದ್ದು ಎಂದು ಲೇವಡಿ ಮಾಡಿದ್ದಾರೆ.

ತಿಂಗಳು ಹಣ ಹಾಕುವುದಕ್ಕೆ ಅದೇನು ಸಂಬಳನಾ?

ಬೆಂಗಳೂರು: ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೀಗ ಫಲಾನುಭವಿಗಳಿಗೆ ಸರಿಯಾಗಿ ಹಣ ಪಾವತಿ ಮಾಡದೇ ಮೋಸ ಮಾಡುತ್ತಿದೆ ಎಂಬ ಆಕ್ರೋಶ ಕೇಳಿಬರುತ್ತಿದ್ದು, ಈ ನಡುವಲ್ಲೇ ಸಚಿವ ಕೆಜೆ ಜಾರ್ಜ್ ಅವರು ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಿಂಗಳು ತಿಂಗಳು ಹಣ ಹಾಕುವುದಕ್ಕೆ ಅದೇನು ಸಂಬಳನಾ? ಹಾಕುತ್ತಾರೆ ಬಿಡಿ ಎಂಬ ಹೇಳಿಕೆ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.