Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರೀಯ ಬಸವಸೈನ್ಯದಿಂದ ಶಿವಾಜಿ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ರಾಷ್ಟ್ರೀಯ ಬಸವಸೈನ್ಯದಿಂದ ಶಿವಾಜಿ ಜಯಂತಿ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪರಕೀಯರ ಆಡಳಿತ ಕಿತ್ತೊಗೆದು ಸ್ವರಾಜ್ಯ ಸ್ಥಾಪಿಸಿದ ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರಪ್ರೇಮಿ, ನ್ಯಾಯವಂತ, ದಕ್ಷ ಆಡಳಿತಗಾರರಾಗಿದ್ದರು ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತೋತ್ಸವದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿದ ಅವರು, ಶಿವಾಜಿಯ ತಾಯಿ ವೀರಮಾತೆ ಜೀಜಾಬಾಯಿ ಅವರು ಶಿವಾಜಿಗೆ ರಾಮಾಯಣ, ಮಹಾಭಾರತ ಮಹಾಕಾವ್ಯಗಳ ಜೊತೆಗೆ ಶೌರ್ಯ ನೈತಿಕತೆಯ ಪಾಠಗಳನ್ನು ಹೇಳುತ್ತ ಜೀವನ ಮೌಲ್ಯಗಳ ಶಿಕ್ಷಣ ನೀಡಿದರು. ಇವರ ಗುರು ದಾದಾಜಿ ಕೊಂಡದೇವ ಶಸ್ತ್ರಾಸ್ತ್ರ ವಿದ್ಯೆ, ಕಲಿಸಿ, ತರುಣ ವೀರನ ಮನಸ್ಸನ್ನು ಜಾಗೃತಗೊಳಿಸಿದರು. ಹಿಂದೂ ಧರ್ಮ ಪುನರುಜ್ಜೀವನಗೊಳಿಸಬೇಕು, ಸ್ವರಾಜ್ಯ ಕಟ್ಟಬೇಕೆಂಬ ಆಕಾಂಕ್ಷೆಯಿಂದ ಮರಾಠ ಮುಖಂಡರು ಮತ್ತು ಪಶ್ಚಿಮ ಘಟ್ಟಗಳ ಮಾವಳರೆಂಬ ದೃಢಕಾಯರಾದ ಗಿರಿಜನರನ್ನು ಸೇರಿಸಿ ತರುಣರ ಪಡೆಯನ್ನು ಕಟ್ಟಿದರು. ಶಿವಾಜಿಯು ಸಂತ ರಾಮದಾಸರ ಪರಮ ಭಕ್ತರಾಗಿದ್ದರು. ಹಿಂದು ಧರ್ಮಕ್ಕೆ ಛತ್ರಪತಿ ಶಿವಾಜಿಯ ಕೊಡುಗೆ ಅಪಾರವಾಗಿದೆ. ದಕ್ಷ ಆಡಳಿತಗಾರರಿಗೆ ಅವರು ಎಂದೆಂದಿಗೂ ಪ್ರೇರಣಾದಾಯಕರಾದವರು. ಯಾವುದೇ ಮಹಾಪುರುಷರನ್ನು ಜಾತಿ, ಧರ್ಮಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಶಿವಾಜಿ ಮಹಾರಾಜರು ದೇಶಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಜಯಂತೋತ್ಸವದಲ್ಲಿ ರಾಷ್ಟ್ರೀಯ ಬಸವಸೈನ್ಯದ ಮುಖಂಡರಾದ ಶ್ರೀಕಾಂತ ಕೊಟ್ರಶೆಟ್ಟಿ, ಸುನೀಲಗೌಡ ಚಿಕ್ಕೊಂಡ, ಜಟ್ಟಿಂಗರಾಯ ಮಾಲಗಾರ ,ಮನ್ನಾನ ಶಾಬಾದಿ ,ಪ್ರಶಾಂತ ಮುಂಜಾನೆ, ಶಿವಾನಂದ ಚವ್ಹಾಣ ,ಅಮಿತ ಗಾಯಕವಾಡ, ಮಾಂತೇಶ ಹೆಬ್ಬಾಳ, ಶ್ರೀಧರ ಗಾಯಕವಾಡ, ಮಹಾದೇವ ನಾಯ್ಕೊಡಿ, ಅರವಿಂದ ಗೊಳಸಂಗಿ, ರೋಹಿತ ಗಾಯಕವಾಡ, ಅರುಣ ಗೊಳಸಂಗಿ, ರಿತೇಶ ಗಾಯಕವಾಡ, ಹಣಮಂತ ಅಡಗಿಮನಿ, ಶ್ರೀಧರ ಕುಂಬಾರ, ಮಹೇಶ ಪಾರಶೆಟ್ಟಿ ಇತರರು ಭಾಗವಹಿಸಿದ್ದರು. ರಾಷ್ಟ್ರೀಯ ಬಸವಸೈನ್ಯದ ತಾಲೂಕಾ ಅಧ್ಯಕ್ಷ ಸಂಜುಗೌಡ ಬಿರಾದಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.