ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ವಿಜಯಪುರದಲ್ಲಿ ಫೆ.24 ರಂದು ನಡೆಯಲಿರುವ 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲೂಕಿನ ಇಂಗಳೇಶ್ವರ ಗ್ರಾಮದ ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಸ್ವಾಮೀಜಿ ಅವರನ್ನು ಆಯ್ಕೆ ಮಾಡಿರುವುದು ಸಂತಸದ ವಿಷಯವಾಗಿದೆ. ಕಳೆದ 70 ವರ್ಷದಿಂದ ಧಾರ್ಮಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅವರ ಆಯ್ಕೆ ಸೂಕ್ತವಾಗಿದೆ. ಅವರ ಆಯ್ಕೆಯಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಗೌರವ ಬಂದಂತಾಗಿದೆ. ಅವರನ್ನು ಆಯ್ಕೆ ಮಾಡಲು ಸಹಕರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹಾಗೂ ಪದಾಧಿಕಾರಿಗಳು ಕೃತಜ್ಞತೆಗಳು. ಬಹುದಿನಗಳ ನಂತರ ಸೂಕ್ತ ವ್ಯಕ್ತಿಗೆ ಸೂಕ್ತ ಸ್ಥಾನ ಸಿಕ್ಕಂತಾಗಿದೆ. ಪೂಜ್ಯರು ಎಲ್ಲಾ ಪ್ರಶಸ್ತಿಗಳಿಗಿಂತಲೂ ಹೆಚ್ಚಿನ ಅರ್ಹತೆ ಹೊಂದಿದ್ದಾರೆ. ಅಂತವರ ಆಯ್ಕೆ ಇಡೀ ಜಿಲ್ಲೆಯ ಜನರಿಗಷ್ಟೇ ಅಲ್ಲ. ರಾಜ್ಯದ ಜನರಿಗೆ ಸಂತಸ ತಂದಿದೆ. ಚನ್ನಬಸವ ಸ್ವಾಮೀಜಿಯವರನ್ನು ಆಯ್ಕೆ ಮಾಡುವ ಮೂಲಕ ಸಾಹಿತ್ಯ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಿದೆ ಎಂದು ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
