ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ೨೦೨೪-೨೫ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಕ್ರೀಡೆಗೆ ಮಹಿಳಾ ವಿವಿಯ ವುಶು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ವುಶು ಕ್ರೀಡೆಯು ಇದೇ ದಿ. ೨೨ ರಿಂದ ೨೭ ರವರೆಗೆ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಜರುಗಲಿದ್ದು ಸದರಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವುಶು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ತಂಡದ ತರಬೇತಿದಾರಾಗಿ ಅನಿತಾ ಚವ್ಹಾಣ ಮತ್ತು ವ್ಯವಸ್ಥಾಪಕರಾಗಿ ಜಬಿನತಾಜ ಜಿಗಳೂರ ಭಾಗವಹಿಸಲಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಸಕ್ಪಾಲ್ ಹೂವಣ್ಣ ಶುಭ ಹಾರೈಸಿದ್ದಾರೆ.

