Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್
(ರಾಜ್ಯ ) ಜಿಲ್ಲೆ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

11,000 ಪುಟಗಳ ತನಿಖಾ ವರದಿ ಕೋರ್ಟ್’ಗೆ ಸಲ್ಲಿಕೆ | ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.
ತನಿಖಾಧಿಕಾರಿ ಎಸ್‌ಪಿ ಉದೇಶ್ ಅವರು, ಇಂದು ಬೆಳಗ್ಗೆ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
82ನೇ ಸಿಟಿ ಸಿವಿಲ್ ಕೋರ್ಟ್ ನ ನ್ಯಾ.ಸಂತೋಷ್ ಗಜಾನನ ಭಟ್ ಅವರ ಮುಂದೆ 11, 000 ಸಾವಿರ ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ.
50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು, 27 ಸಂಪುಟ, 11,000 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್‌ ಎಂದೇ ಉಲ್ಲೇಖಿಸಿದ್ದಾರೆ.
ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪೊಲೀಸರು 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಸದ್ಯ ಅಂತಿಮ ವರದಿ ಸಲ್ಲಿಕೆಯಾದರೂ ಪ್ರಕರಣದ ತನಿಖೆ ಮುಂದುವರೆಯಲಿದೆ. ಕ್ಲೀನ್ ಚಿಟ್ ನೀಡಿದ ನಾಲ್ವರನ್ನು ಹೊರತುಪಡಿಸಿ ಉಳಿದವರ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಲಿದ್ದಾರೆ.
ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನಲ್ಲಿ ಯಾವುದೇ ಸಾಕ್ಷ್ಯವಿಲ್ಲ ಎಂದು ಲೋಕಾಯುಕ್ತ ಪೊಲೀಸರು ಸ್ಪಷ್ಟಪಡಿಸಿದ್ದರಲ್ಲದೆ, ಸಾಕ್ಷ್ಯಾಧಾರಗಳ ಕೊರತೆ ಎಂದು ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಇದರಿಂದ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ವಿರುದ್ಧ ಕೆಂಡಾಮಂಡಲಗೊಂಡಿದ್ದಾರೆ.

ರಾಜಕೀಯ ಪ್ರೇರಿತ ಆರೋಪ: ಡಿಸಿಎಂ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್​​ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, ನಾನು ಏನು ಹೇಳಬೇಕೋ ಹೇಳಿದ್ದೆ. ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ? ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಮುಡಾದವರು ಕೊಟ್ಟಿದ್ದಾರೆ. ನಮಗೆ ಇಂತಹದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ ಎಂದು ಸಮರ್ಥಿಸಿಕೊಂಡರು.

ಇದರ ಹೊಣೆ ಬಿಜೆಪಿ-ಜೆಡಿಎಸ್‌ ಹೊರಬೇಕು

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಾತನಾಡಿ, ಮುಡಾ ಕೇಸ್‌ನಲ್ಲಿ ಸಿಎಂ ಪಾತ್ರ ಇಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಸಿಎಂ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನ ನೀಡಿರುವ ವಿಚಾರದಲ್ಲಿ ಅವರು ಯಾವುದೇ ಪ್ರಭಾವ ಬೀರಿಲ್ಲ. ಎಲ್ಲರಿಗೂ ಕೊಡುವಂತೆ ಸಿಎಂ ಪತ್ನಿ ಅವರಿಗೂ ಬದಲಿ ನಿವೇಶನ ನೀಡಿದ್ದಾರೆ. ಈ ಕೇಸ್‌ನಿಂದ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್‌ ಸಿಕ್ಕಿದೆ. ಈ ಅಕ್ರಮ ನಡೆದಿರುವುದು ಬಿಜೆಪಿ ಅವಧಿಯಲ್ಲಿ. ಈಗ ಇದರ ಹೊಣೆ ಬಿಜೆಪಿ-ಜೆಡಿಎಸ್‌ನವರು ಹೊರಬೇಕು ಎಂದು ತಿಳಿಸಿದರು.

ಪ್ರಕರಣ ಹಿನ್ನೆಲೆ

ಮೈಸೂರಿನ ದೇವನೂರು ಬಡಾವಣೆಯಲ್ಲಿ ದೇವನೂರು 3ನೆ ಹಂತದ ಬಡಾವಣೆ ಅಭಿವೃದ್ಧಿಗೆ ಸ್ವಾಧೀನಪಡಿಸಿಕೊಂಡಿದೆ ಎನ್ನಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ರೂ. ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ.
ಅದರಲ್ಲಿ ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಆ ಸಂಬಂಧ ತನಿಖೆ, ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡುವಂತೆ ಸ್ನೇಹಮಯಿ ಕೃಷ್ಣ ಸೇರಿ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್‍ನಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.
ರಾಜ್ಯಪಾಲರು ಪ್ರಕರಣದ ತನಿಖೆ, ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿ ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಲ್ಲಿಸಿದ್ದ ಅರ್ಜಿಯನ್ನು ಸೆ.24ರಂದು ಹೈಕೋರ್ಟ್ ತಿರಸ್ಕರಿಸಿತ್ತು. ಆ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಎಫ್‍ಐಆರ್ ದಾಖಲಾದ ದಿನವೇ ಅಂದರೆ ಸೆ.27ರಂದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಹ ಸಲ್ಲಿಸಿದ್ದರು.

ದೂರುದಾರ ಸ್ನೇಹಮಯಿ ಕೃಷ್ಣ ಆಕ್ರೋಶ

ಮೊದಲಿನಿಂದಲೂ ಈ ಪ್ರಕರಣದ ಸರಿಯಾಗಿ ತನಿಖೆ ನಡೆಯುತ್ತಿಲ್ಲ ಎಂದು ಹೇಳುತ್ತಿದ್ದೆ, ಈಗ ಸಾಕ್ಷ್ಯಾಧಾರಗಳ ಕೊರತೆ ಎಂದು ಬಿ ರಿಪೋರ್ಟ್ ಹಾಕಲು ಹೊರಟಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಷ್ಟೊಂದು ದಾಖಲೆಗಳಿದ್ದರೂ ಸಾಕ್ಷ್ಯಾಧಾರಗಳ ಕೊರತೆ ಎಂದು ಹೇಳುತ್ತಿರುವುದು ಸರಿಯಲ್ಲ. 10ನೇ ತರಗತಿ ಪಾಸಾದ ನನಗೆ ಕಾನೂನಿನ ಅರಿವಿರುವಷ್ಟು ಲೋಕಾಯುಕ್ತ ಅಧಿಕಾರಿಗಳಿಗೆ ಇಲ್ಲವೇ? ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬವನ್ನು ರಕ್ಷಿಸಲು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಗಿಯುವ ಮುನ್ನವೇ ವರದಿ ಸಲ್ಲಿಸಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.