Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೆಲಂಗಾಣಕ್ಕೆ ನೀರು ಹರಿಸದಿರಲು ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ತೆಲಂಗಾಣಕ್ಕೆ ನೀರು ಹರಿಸದಿರಲು ಆಗ್ರಹಿಸಿ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ತೆಲಂಗಾಣ ರಾಜ್ಯಕ್ಕೆ 5 ಟಿಎಂಸಿ ಅಡಿ ನೀರನ್ನು ಯಾವುದೇ ಕಾರಣಕ್ಕೂ ಹರಿಸಬಾರದು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಗುರುವಾರ, ಆಲಮಟ್ಟಿಯಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ವಿಜಯಪುರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ತೆಲಂಗಾಣ ಸರ್ಕಾರ 5 ಟಿಎಂಸಿ ಅಡಿ ನೀರನ್ನು ಹರಿಸಿ ಎಂದು ರಾಜ್ಯ ಸರ್ಕಾರಕ್ಕೆ ಪತ್ರಬರೆದಿದೆ. ಎರಡೂ ರಾಜ್ಯಗಳಲ್ಲಿ ಒಂದೇ ಪಕ್ಷದ ಅಧಿಕಾರ ಇದೆ. ರಾಜಕೀಯ ಹಿತದೃಷ್ಠಿಯಿಂದ ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ನೀರು ಹರಿಸಿದರೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಆಲಮಟ್ಟಿ, ನಾರಾಯಣಪುರ ಎರಡೂ ಜಲಾಶಯಗಳಲ್ಲಿ ಕುಡಿಯುವ ನೀರು, ಜಲಚರ, ನೀರು ಆವಿ ಆಗುವಿಕೆ, ಕೈಗಾರಿಕೆ, ವಿದ್ಯುತ್ ಸ್ಥಾವರಗಳು ಮತ್ತೀತರ ಬಳಕೆಗೆ ಕನಿಷ್ಠ 35 ಟಿಎಂಸಿ ಅಡಿ ನೀರು ಕಾಯ್ದಿರಿಸಬೇಕಾಗುತ್ತದೆ. ಬೇಸಿಗೆಯಲ್ಲಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಬೇಕಾಗುತ್ತದೆ. ಆದರೆ ಸದ್ಯ ಸಂಗ್ರಹವಿರುವ ನೀರಿನಲ್ಲಿ ಹಿಂಗಾರು ಹಂಗಾಮಿಗೆ ನೀರು ಪೂರೈಸಿ ಅಷ್ಟು ಪ್ರಮಾಣದಲ್ಲಿ ನೀರು ಉಳಿಯುವುದೇ ಅನುಮಾನ. ಹೀಗಾಗಿ ಯಾವುದೇ ಕಾರಣಕ್ಕೂ ತೆಲಂಗಾಣಕ್ಕೆ ನೀರು ಹರಿಸಬಾರದು ಎಂದು ಅವರು ಆಗ್ರಹಿಸಿದರು.
ಒಂದು ವೇಳೆ ನೀರು ಹರಿಸಿದರೇ ಜಿಲ್ಲೆಯ ಜನ, ಜಾನುವಾರುಗಳು ಬೇಸಿಗೆಯಲ್ಲಿ ಕುಡಿಯುವ ನೀರಿಲ್ಲದೇ ಪರದಾಡಬೇಕಾಗುತ್ತದೆ ಎಂದರು. ಬೇಸಿಗೆ ಬಂತೆಂದರೇ ತೆಲಂಗಾಣ ಹಾಗೂ ಆಂಧ್ರ ರಾಜ್ಯಗಳಿಗೆ ಆಲಮಟ್ಟಿ ಅಣೆಕಟ್ಟಿನ ನೀರಿನ ನೆನಪಾಗುತ್ತದೆ. ಆದರೆ ಆಲಮಟ್ಟಿ ಜಲಾಶಯ ಎತ್ತರಕ್ಕೆ ಎರಡೂ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತವೆ. ಮೊದಲು ಸುಪ್ರಿಂಕೋರ್ಟ್ ನಲ್ಲಿ ಆಲಮಟ್ಟಿ ಜಲಾಶಯ ಎತ್ತರವಾಗದಂತೆ ಹಾಕಿರುವ ವಿವಿಧ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದು ಜಲಾಶಯದ ಎತ್ತರಕ್ಕೆ ಸಮ್ಮತಿ ನೀಡಲಿ ಎಂದು ಅವರು ಆಗ್ರಹಿಸಿದರು.
ಒಂದು ವೇಳೆ ಯಾರಿಗೂ ಗೊತ್ತಾಗದಂತೆ ನೀರು ಹರಿಸದರೇ ಮುಖ್ಯ ಎಂಜಿನಿಯರ್ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು, ಆಲಮಟ್ಟಿ ಜಲಾಶಯದ ಹೊರಹರಿವಿನ ಮೇಲೆ ನಿರಂತರ ನಿಗಾ ಇಡಲಾಗುವುದು ಎಂದರು. ಸಂಘದ ಬಸವನಬಾಗೇವಾಡಿ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ವಾಲಿಕಾರ, ಹೊನಕೇರೆಪ್ಪ ತೆಲಗಿ, ಪ್ರಹ್ಲಾದ ನಾಗರಾಳ, ವಿಠ್ಠಲ ಬಿರಾದಾರ, ಲಾಲಸಾಬ್ ಹಳ್ಳೂರ, ಶೆಟ್ಟೆಪ್ಪ ಲಮಾಣಿ, ಹಣಮಂತ ಕಲಬುರ್ಕಿ, ರಾಮನಗೌಡ ಹಾದಿಮನಿ, ಯಮನಪ್ಪ ಸರೂತ ,ಸಾಹೇಬಗೌಡ ಹೊಸೂರ ಇದ್ದರು.
ಮುಖ್ಯ ಎಂಜಿನಿಯರ್ ಡಿ. ಬಸವರಾಜ ಮನವಿ ಸ್ವೀಕರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.