ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಫೆ.೨೨ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ ೮.೨೫ಕ್ಕೆ ಬೆಳಗಾವಿಯಿಂದ ಹೊರಟು, ಮಧ್ಯಾಹ್ನ ೧೨.೨೫ಕ್ಕೆ ವಿಜಯಪುರಕ್ಕೆ ಆಗಮಿಸುವರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ೩೧ನೇ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯ ಮಟ್ಟದ ಸಮ್ಮೇಳನ ಅನುಭಾವ-೨೫ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಅದೇ ದಿನ ಮಧ್ಯಾಹ್ನ ೩.೩೦ಕ್ಕೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
