ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಬಿಳಿಜೋಳ ಖರೀದಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಮಾಲ್ದಂಡಿ ಬಿಳಿಜೋಳ ಪ್ರತಿ ಕ್ವಿಂಟಲ್‌ಗೆ ರೂ.೩,೪೨೧ ಹಾಗೂ ಹೈಬ್ರಿಡ್ ಬಿಳಿಜೋಳ ಪ್ರತಿ ಕ್ವಿಂಟಲ್‌ಗೆ ರೂ.೩,೩೭೧ ರಂತೆ ಸರ್ಕಾರ ಬೆಂಬಲ ಬೆಲೆ ನಿಗದಿಪಡಿಸಿದ್ದು, ಜಿಲ್ಲೆಯ ರೈತರಿಂದ ಖರೀದಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರು ತಿಳಿಸಿದ್ದಾರೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಖರೀದಿ ಏಜೆನ್ಸಿಯಾಗಿದ್ದು, ಇವರು ಜಿಲ್ಲೆಯಲ್ಲಿ ರೈತರ ನೋಂದಣಿ ಕಾರ್ಯ ಕೈಗೊಳ್ಳಲಿದ್ದು, ಮಾರ್ಚ್ ೩೧ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಏಳು ಖರೀದಿ ಕೇಂದ್ರಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದು, ವಿಜಯಪುರದ ಎಪಿಎಂಸಿ ಆವರಣ, ಬಸವನ ಬಾಗೇವಾಡಿಯ ಎಪಿಎಂಸಿ ಆವರಣ, ತೆಲಗಿ ರೇಲ್ವೆ ನಿಲ್ದಾಣ ಹತ್ತಿರ, ಮುದ್ದೇಬಿಹಾಳದ ಎಸ್‌ಡಬ್ಲ್ಯುಸಿ ಬಿದರಕುಂದಿ, ತಾಳಿಕೋಟೆಯ ಸರ್ಕಾರಿ ಆಸ್ಪತ್ರೆ ಹಿಂದುಗಡೆ, ಇಂಡಿಯ ಕೆಇಬಿ ಹತ್ತಿರ ಹಾಗೂ ಗೋಲಗೇರಿ ರೋಡ ಸಿಂದಗಿಯಲ್ಲಿ ಸ್ಥಾಪಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಖರೀದಿ ಕೇಂದ್ರಗಳನ್ನು ಹಾಗೂ ವಿಜಯಪುರದ ಕೆಎಫ್‌ಸಿಎಸ್‌ಸಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆಗೆ :೯೪೪೮೪೯೬೦೧೬ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

