Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿಸಿಎಂ ಡಿ.ಕೆ.ಶಿವಕುಮಾರ ರಾಜೀನಾಮೆಗೆ ಬಿಜೆಪಿ ಆಗ್ರಹ
(ರಾಜ್ಯ ) ಜಿಲ್ಲೆ

ಡಿಸಿಎಂ ಡಿ.ಕೆ.ಶಿವಕುಮಾರ ರಾಜೀನಾಮೆಗೆ ಬಿಜೆಪಿ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರೇ ಬಂದರೂ ಬೆಂಗಳೂರಿನ ಟ್ರಾಫಿಕ್’ ಸಮಸ್ಯೆ ಸರಿಪಡಿಸಲು ಸಾಧ್ಯವಿಲ್ಲ ಎಂಬ ಡಿಸಿಎಂ ಹೇಳಿಕೆಗೆ ತೀವ್ರ ಖಂಡನೆ

ಬೆಂಗಳೂರು: ಮುಂದಿನ ಎರಡು ಅಥವಾ ಮೂರು ವರ್ಷಗಳಲ್ಲಿ ಬೆಂಗಳೂರಿನ ಟ್ರಾಫಿಕ್ ಅನ್ನು ದೇವರೂ ಬಂದರೂ ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶುಕ್ರವಾರ ಆಗ್ರಹಿಸಿದೆ.
ನಗರದ ಟ್ರಾಫಿಕ್ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ಡಿಕೆ ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಮಸ್ಯೆಗಳನ್ನು ನಿಭಾಯಿಸುವ ಸಮರ್ಥ ವ್ಯಕ್ತಿಗೆ ಅವಕಾಶ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಒತ್ತಾಯಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರು ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ, “ನಾನು ಮಾಧ್ಯಮ ಸ್ನೇಹಿತರಿಗೆ ಮತ್ತು ಇತರರಿಗೆ ಹೇಳಲು ಬಯಸುತ್ತೇನೆ, ಸ್ವತಃ ದೇವರೇ ಮೇಲಿನಿಂದ ಇಳಿದು ಬಂದರೂ, ಮುಂದಿನ ಒಂದು ವರ್ಷ, ಎರಡು ವರ್ಷ ಅಥವಾ ಮೂರು ವರ್ಷಗಳಲ್ಲಿ ಬೆಂಗಳೂರನ್ನು(ಸರಿಪಡಿಸಲು) ಸಾಧ್ಯವಿಲ್ಲ. ಈ ಸಮಸ್ಯೆಗಳನ್ನು ಸರಿಪಡಿಸಲು ನಾವು ಸರಿಯಾಗಿ ಯೋಜಿಸಬೇಕು, ಯೋಜನೆಗಳನ್ನು ಸರಿಯಾಗಿ ಕಾರ್ಯಗತಗೊಳಿಸಬೇಕು ಮತ್ತು ಮುಂದಿನ ದಿನಗಳಿಗೆ ಸರಿಯಾದ ರೂಪರೇಷೆ ನೀಡಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡುತ್ತೇನೆ ಎಂದು ಡಂಗೂರ ಸಾರಿದ್ದ ಪಾರ್ಟ್ ಟೈಂ ಬೆಂಗಳೂರು ಅಭಿವೃದ್ಧಿ ಮಂತ್ರಿಗಳ ಹೊಸ ವರಸೆ ನೋಡಿ. ಸ್ವತಃ ದೇವರೇ ಬಂದರೂ 2-3 ವರ್ಷ ಬೆಂಗಳೂರಿನ ಅಭಿವೃದ್ಧಿ ಸಾಧ್ಯವಿಲ್ಲವಂತೆ. ಇದು ಡಿಸಿಎಂ ಸಾಹೇಬರ ನುಡಿಮುತ್ತುಗಳು ಎಂದು ಟೀಕಿಸಿದ್ದಾರೆ.
ಬೆಂಗಳೂರಿನ ನಾಗರಿಕರ ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಅವರು ರಾಜೀನಾಮೆ ನೀಡಿ ಸಮರ್ಥ ವ್ಯಕ್ತಿಗೆ ದಾರಿ ಮಾಡಿಕೊಡಿ. ನಿಮ್ಮ ರಾಜಕೀಯ ಪ್ರತಿಷ್ಠೆಗೆ, ಅಧಿಕಾರದ ದುರಾಸೆಗೆ ಬೆಂಗಳೂರು ನಗರದ ಅಭಿವೃದ್ಧಿಯನ್ನು ಯಾಕೆ ಬಲಿ ಕೊಡುತ್ತೀರಿ” ಎಂದು ಆರ್ ಅಶೋಕ್ “ಎಕ್ಸ್” ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಹ ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು, ಬೆಂಗಳೂರನ್ನು ಸಿಂಗಾಪುರದಂತೆ ಮಾಡುವುದಾಗಿ ಮತ್ತು ರಾಜ್ಯವನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಶಿವಕುಮಾರ್ ಮತ್ತು ಕಾಂಗ್ರೆಸ್ ಈಗ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದಿದ್ದಾರೆ.
ಇನ್ನು, ಒಂದು ಗುಂಡಿ ಮುಚ್ಚಲು ಇವರಿಗೆ ಯೋಗ್ಯತೆ ಇಲ್ಲ, ಅನುದಾನ ಕೊಡಲು ಆಗಲ್ಲ. ಬೆಂಗಳೂರು ಬಗ್ಗೆ ಡಿಕೆ ಶಿವಕುಮಾರ್ ಅವರ ಈ ಥರ ಹೇಳಿಕೆ ಸಹಜವಾಗಿ ಎಲ್ಲರಿಗೂ ಬೇಸರ ತರಿಸಿದೆ. ಬೆಂಗಳೂರನ್ನು ಸಿಂಗಾಪುರ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದ್ರು. ಒಂದು ಗುಂಡಿ‌ ಮುಚ್ಚಲು ಯೋಗ್ಯತೆ ಇಲ್ಲ ಇವರಿಗೆ, ಟನೆಲ್ ರಸ್ತೆ ಬಗ್ಗೆ ಮಾತಾಡ್ತಾರೆ ಎಂದು ಅವರು ಕಿಡಿಕಾರಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.