ದೇವರಹಿಪ್ಪರಗಿ: ಕಳೆದ ಐದು ವರ್ಷಗಳಲ್ಲಿ ಸಾವಿರಾರು ಕೋಟಿ ರೂ. ಅನುದಾನ ತಂದು ಮತಕ್ಷೇತ್ರದ ಅಭಿವೃದ್ಧಿ ಮಾಡಿರುವುದೇ ನನಗೆ ಶ್ರೀರಕ್ಷೆಯಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನನಗೆ ಮತ್ತೊಮ್ಮೆ ಬೆಂಬಲಿಸಿ ಆಶೀರ್ವಾದ ಮಾಡಬೇಕೆಂದು ಶಾಸಕ, ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಮನವಿ ಮಾಡಿದರು.
ದೇವರಹಿಪ್ಪರಗಿ ಮತಕ್ಷೇತ್ರದ ಕೋರವಾರ ಗ್ರಾಮದಲ್ಲಿ ವಿಧಾನಸಭಾ ಚುನಾವಣಾ ನಿಮಿತ್ಯ ಬಿಜೆಪಿಯ ನೂರಾರು ಪದಾಧಿಕಾರಿಗಳು, ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಕಳೆದ ಐದು ವರ್ಷಗಳಲ್ಲಿ ಪ್ರತಿಯೊಂದು ಇಲಾಖೆಯ ಸಚಿವರನ್ನು ಸಂಪರ್ಕಿಸಿ ಅನುದಾನ ತಂದು ಅಭಿವೃದ್ಧಿ ಪಡಿಸಿರುವೆ. ನಮ್ಮ ಕ್ಷೇತ್ರದ ಪ್ರತಿಯೊಬ್ಬ ರೈತನ ಜಮೀನಿಗೆ ನೀರು ಹರಿಯಬೇಕೆಂಬ ಸಂಕಲ್ಪದಿAದ ನೀರಾವರಿ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ತಂದು ಚಾಲನೆ ನೀಡಲಾಗಿದೆ. ಸುಮಾರು ೨.೫೦ ಲಕ್ಷ ಎಕರೆ ಭೂಮಿ ನೀರಾವರಿಯಾಗಲಿದ್ದು, ಬಹುತೇಕ ಎಲ್ಲ ಕೆರೆಗಳಿಗೆ ಕಾಯಕಲ್ಪ ನೀಡಲಾಗಿದ್ದು, ಕಾಲವೆಗಳ ಮುಖಾಂತರ ನೀರು ತುಂಬಿಸಲಾಗಿದೆ. ರಸ್ತೆಗಳ ಸುಧಾರಣೆಗೆ ಸಾಕಷ್ಟು ಅನುದಾನ ನೀಡಲಾಗಿದೆ. ಅದಕ್ಕಾಗಿ ಅಭಿವೃದ್ಧಿ ಪರ್ವ ಮುಂದುವರೆಯಲು ಜಾತಿ ಬೇಧ ಮಾಡದೆ ಪ್ರತಿಯೊಬ್ಬರೂ ನನಗೆ ಬೆಂಬಲಿಸಿ, ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.
ದೇವರ ಹಿಪ್ಪರಗಿ ಬಿಜೆಪಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದರೆಡ್ಡಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಇಡೀ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಅನುದಾನ ತಂದು ಕ್ಷೇತ್ರದ ಪ್ರಗತಿಗೆ ಶ್ರಮಿಸಿದ್ದಾರೆ. ಜಿಲ್ಲೆಯಲ್ಲಿಯೇ ನಮ್ಮ ಕ್ಷೇತ್ರ ಅತ್ಯಂತ ಶಾಂತಿ, ಬಾವೈಕ್ಯತೆಗೆ ಹೆಸರಾಗಿದೆ. ಇಲ್ಲಿ ಎಲ್ಲರೂ ಸೌಹಾರ್ಧತೆಯಿಂದ ಇರುವುದೇ ಇದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ಜಾತ್ಯಾತೀತ ನಿಲುವಿನ ಬಿಜೆಪಿ ಅಭ್ಯರ್ಥಿ ಸೋಮನಗೌಡರನ್ನು ಅಧಿಕ ಮತಗಳಿಂದ ಗೆಲ್ಲಿಸಬೇಕೆAದು ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ(ಅಸ್ಕಿ), ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ರೈತಮೋರ್ಚಾ ಕಾರ್ಯದರ್ಶಿ ಸಿದ್ದು ಬುಳ್ಳಾ ಮತ ಯಾಚಿಸಿ ಮಾತನಾಡಿದರು.
ಪ್ರಚಾರ ಸಭೆಯಲ್ಲಿ ಬಿಜೆಪಿ ಮುಖಂಡರಾದ ಪ್ರೇಮಾನಂದ ಸಾಹುಕಾರ ಮಾಡಗಿ, ಬಸಲಿಂಗಪ್ಪ ಮಾಶ್ಯಾಳ, ಬಾಬುಗೌಡ ಸಿದರೆಡ್ಡಿ, ಸುಭ್ಬರಾಯ ಸಾಲೋಡಗಿ, ರಾಜಶೇಖರ ಸಿದರೆಡ್ಡಿ, ಸಿದ್ದು ಸಿದರೆಡ್ಡಿ, ನಿಂಗನಗೌಡ ಬಿರಾದಾರ, ಶೇಖರಗೌಡ ಪಡೇಕನೂರ, ಕಾಸು ಕುಂಬಾರ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಸಾರ್ವಜನಿಕರು ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment